ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪೈಪೋಟಿ ಎದುರಿಸಲು ಸಿದ್ದರಾಗಬೇಕು – ಹರತಾಳು ಹಾಲಪ್ಪ|GJC

ರಿಪ್ಪನ್‌ಪೇಟೆ :  ಶ್ರೀಮಂತರ ಮತ್ತು ಸರ್ಕಾರಿ ನೌಕರರ ಅಧಿಕಾರಿಗಳ ಮಕ್ಕಳ ಮುಂದೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಸ್ಪರ್ಧಾತ್ಮಕ ಪೈಪೋಟಿ ನಡೆಸಬೇಕಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರೊಂದಿಗೆ ಬೌದ್ಧಿಕ ಬೆಳವಣಿಗಗೆ ಸಹಕಾರಿಯಾಗಬೇಕು ಎಂದು ಶಾಸಕ ಹರತಾಳು ಹಾಲಪ್ಪ ಕರೆ ನೀಡಿದರು.

ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಶುಕ್ರವಾರ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಗುರುಗಳ, ತಂದೆ-ತಾಯಿಯರ ಪೋಷಕರ ಮಾರ್ಗದರ್ಶನದೊಂದಿಗೆ ಶಿಸ್ತುಬದ್ದ ಬದುಕಿಗೆ ಸರಿಯಾದ ಮಾರ್ಗದರ್ಶನ ಕೊಡಿಸಬೇಕು. ಇಲ್ಲದಿದ್ದರೆ ಭಾರಿ ಸಂಕಷ್ಟ ಎದುರಿಸಬೇಕಾಗುವುದು. ಕಳೆದ ಎರಡು ವರ್ಷದಲ್ಲಿ ಕೊರೊನಾ ಮಹಾಮಾರಿಯಿಂದಾಗಿ ಸಾಕಷ್ಟು ಕ್ರೀಡಾ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ದೂರು ಉಳಿಯಬೇಕಾದ ಪರಿಸ್ಥಿತಿ ಎದುರಾಗಿತ್ತು ಈಗ ಅಂತಹ ಪರಿಸ್ಥಿತಿಯಿಲ್ಲ,ಶಾಲಾ ಕಾಲೇಜುಗಳಲ್ಲಿ ಕ್ರೀಡಾ ಸಾಂಸ್ಕೃತಿಕ ಚಟುವಟಿಯಲ್ಲಿ ಉಪನ್ಯಾಸಕರುಗಳು ತೊಡಗಿಕೊಳ್ಳುವುದರ ಬದಲು ವಿದ್ಯಾರ್ಥಿಗಳನ್ನು ಸಿದ್ದಪಡಿಸಿ ಅವರಿಂದಲೇ ಮಾಡಿಸಿದಾಗ ಅವರಿಗೂ ವೇದಿಕೆಯಲ್ಲಿ ನಿಂತು ಮಾತನಾಡುವ ಧೈರ್ಯ ಬರುವುದು ಎಂದು ಹೇಳಿದರು.

ಮುಂದಿನ ವರ್ಷದಲ್ಲಿ ನಾನೇ ಪುನಃ ಈ ಕ್ಷೇತ್ರದ ಶಾಸಕನಾಗಿ ಬರುತ್ತೇನೆ ಅಂದಿನ ಸಮಾರೋಪದ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳೇ ಈ ಎಲ್ಲವನ್ನು ನಿರ್ವಹಿಸುವ ಜವಬ್ದಾರಿಯನ್ನು ಮಾಡುವಂತಾಗಲಿ ಎಂದು ಪ್ರಾಚಾರ್ಯರಿಗೆ ಮತ್ತು ಉಪನ್ಯಾಸಕರಿಗೆ ಕಿವಿಮಾತು ಹೇಳಿದರು.

ಶಿವಮೊಗ್ಗ ಜಿಲ್ಲಾ ಕಾಲೇಜ್ ಉಪನಿರ್ದೇಶಕ ಬಿ.ಕೃಷ್ಣಪ್ಪ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿದರು.

ಕಾಲೇಜಿನ ಪ್ರಾಚಾರ್ಯ ವಿ.ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು.

ಗ್ರಾ.ಪಂ.ಅ.ಮಂಜುಳಾ ಕೇತಾರ್ಜಿರಾವ್, ಉಪಾಧ್ಯಕ್ಷೆ ಮಹಾಲಕ್ಷ್ಮಿ ಸಿಡಿಸಿ ಉಪಾಧ್ಯಕ್ಷ ದೇವೇಂದ್ರಪ್ಪಗೌಡ ನೆವಟೂರು, ಸಿಡಿಸಿ ಸದಸ್ಯರಾದ ಎಂ.ಸುರೇಶ್‌ಸಿಂಗ್, ಶಾಂತಕುಮಾರ್, ಬಿ.ಶಿವಾನಂದ, ವಿನೋದಾ, ಸವಿತಾ ಜಗದೀಶ್ ಇನ್ನಿತರರು ಹಾಜರಿದ್ದರು.

ಉಪನ್ಯಾಸಕ ವಾಸುದೇವ ಸ್ವಾಗತಿಸಿದರು. ಅಂಬಿಕಾ ಮತ್ತು ಸಬಾಸ್ಟಿನ್ ಮ್ಯಾಥ್ಯೂಸ್ ನಿರೂಪಿಸಿದರು. ವಾರ್ಷಿಕ ವರದಿಯನ್ನು ಅರುಣ್‌ರಾಜ್ ಮಂಡಿಸಿದರು. ರಾಜೇಶ್ ಬೋಳಾರ್ ವಂದಿಸಿದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

2 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

2 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

16 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

16 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

23 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago