ಮಲಬಾರ್ ಗೋಲ್ಡ್ ಅಂಡ್ ಡೈಮೆಂಡ್ ಅಂಗಡಿಗೆ ಗ್ರಾಹಕಿಯಂತೆ ಬಂದು ಮಾಂಗಲ್ಯ ಸರ ಕಳವು ಮಾಡಿದ್ದ ಮಹಿಳೆಯನ್ನ ಬಂದಿಸುವಲ್ಲಿ ದೊಡ್ಡಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳ್ಳತನವನ್ನೆ ತನ್ನ ಕಸುಬನ್ನಾಗಿ ಮಾಡಿಕೊಂಡಿದ್ದ ವಿಜಯಪುರ ಜಿಲ್ಲೆಯ ಚಿರಸ್ತಹಳ್ಳಿ ಗ್ರಾಮದ ಗುಂಡಗತ್ತಿ ರಸ್ತೆಯ ಹರಪ್ಪನಹಳ್ಳಿ ತಾಲೂಕಿನ ಆರೋಪಿ ರತ್ನ ಟಿ ಕೋಮ್ ಗೋಣಿಪ್ಪ @ ಗೋಣಿ ಬಸಪ್ಪ ಎಂಬ ಮಹಿಳೆಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ.
ಈ ಮಹಿಳೆ ಕಳೆದ 24.11.2022 ಶಿವಮೊಗ್ಗದ ಬಿ.ಹೆಚ್ ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಹೋಗಿ ಅಂಗಡಿಯ ಕೌಂಟರ್ನಲ್ಲಿದ್ದ ಪವಿತ್ರ ಎಂಬ ಯುವತಿಯ ಗಮನ ಬೇರೆಡೆ ಸೆಳೆದು 60,000 ಮೌಲ್ಯದ 10 ಗ್ರಾಂ 938 ಮಿಲಿ ತೂಕದ ಮಾಂಗಲ್ಯ ಸರವನ್ನು ಎಗುರಿಸಿ ನಕಲಿ ಮಾಂಗಲ್ಯ ಸರವನ್ನು ಆ ಸ್ಥಳದಲ್ಲಿಟ್ಟು ಪರಾರಿ ಆಗಿದ್ದಳು.
ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಪ್ರಕರಣದ ಬೆನ್ನತ್ತಿದ ಪೊಲೀಸರಿಗೆ ಈ ಹಿಂದೆ ಸುಲ್ತಾನ್ ಗೋಲ್ಡಅಂಡ್ ಡೈಮಂಡ್ ಅಂಗಡಿಯಲ್ಲಿ ಆಭರಣ ಕಳ್ಳತನವಾಗಿದ್ದು ಎರಡನ್ನು ಒರೆಹಚ್ಚಿದ ಪೊಲೀಸರು ಚಾಲಾಕಿ ಮಹಿಳೆಯನ್ನ ಬಂಧಿಸಿದ್ದಾರೆ.
ಇಡೀ ಪ್ರಕರಣದ ಸುತ್ತ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿ.ಐ ಅಂಜನಕುಮಾರ್ ನೇತೃತ್ವದಲ್ಲಿ ಮಹಿಳಾ ಪಿ.ಎಸ್.ಐ ಮಂಜಮ್ಮ. ಎ. ಎಸ್ . ಐ . ಚಂದ್ರಶೇಖರ H C ಗಳಾದ ಪಾಲಾಕ್ಷ ನಾಯ್ಕ್., ಶಶಿಧರ್. ಪಿ.ಸಿ ಗಳಾದ ಗುರು ನಾಯ್ಕ್. ಚಂದ್ರ ನಾಯ್ಕ್, ಮನೋಹರ್. ಮಹಿಳಾ ಪಿ ಸಿ ಯಾದ ಪೂಜಾರವರು ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್