ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ – ರಿಪ್ಪನ್ ಪೇಟೆ ಪಿಯು ಕಾಲೇಜಿಗೆ ಪ್ರಥಮ ಸ್ಥಾನ|volleyball

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ – ರಿಪ್ಪನ್ ಪೇಟೆ ಪಿಯು ಕಾಲೇಜಿಗೆ ಪ್ರಥಮ ಸ್ಥಾನ


ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ್   ವಾಲಿಬಾಲ್ ತಂಡ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರೋಲಿಂಗ್ ಕಪ್ ಪಡೆದಿರುತ್ತಾರೆ.




ಶಿವಮೊಗ್ಗದ ಪ್ರಖ್ಯಾತ ಯುನೈಟೆಡ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್(ರಿ.) ಸಂಸ್ಥೆಯು ಖ್ಯಾತ ರಾಷ್ಟ್ರೀಯ ವಾಲಿಬಾಲ್ ಆಟಗಾರ ದಿ. “ಸರ್ದಾರ್ ಜಾಫರ್” ಅವರ ಸ್ಮರಣಾರ್ಥ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ಶಿವಮೊಗ್ಗ ಜಿಲ್ಲಾ ಮಟ್ಟದ “ಪದವಿ ಪೂರ್ವ ಕಾಲೇಜು”ಗಳ “ಹೊನಲು-ಬೆಳಕಿನ” “ವಾಲಿಬಾಲ್ ಫೈನಲ್ ಪಂದ್ಯದಲ್ಲಿ  ರಿಪ್ಪನ್ ಪೇಟೆ  ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಡಿ.ವಿ.ಎಸ್ ಕಾಲೇಜಿನ  ವಿದ್ಯಾರ್ಥಿಗಳ ನಡುವೆ  ನಡೆದ ಫೈನಲ್ ಪಂದ್ಯದಲ್ಲಿ ರಿಪ್ಪನ್ ಪೇಟೆ ಕಾಲೇಜಿನ ವಿದ್ಯಾರ್ಥಿಗಳು ಜಯಶಾಲಿಗಳಾದರು.


ಪಂದ್ಯಾವಳಿಯಲ್ಲಿ ವಿದ್ಯಾರ್ಥಿಗಳಾದ ಚಂದನ್ ಕೆ ರಾವ್ , ನೂತನ್ ಹೆಚ್ ಸಿ ,ಆದರ್ಶ್ ಎಸ್ , ಸುಶೀಲ್ ಎಸ್ ಪವಾರ್ , ರೋಹನ್ ಹೆಚ್ ಎಲ್ , ಶ್ರೇಯಸ್ ಎಸ್ ,ಶ್ರೇಯಸ್ ರಾಜ್ ಅಧ್ಬುತ ಪ್ರದರ್ಶನ ನೀಡಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.




ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ  ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಕಾಲೇಜಿಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದುಕೊಟ್ಟ  ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಾಸಕ ಹಾಗೂ ಎಂ ಎಸ್ ಐ ಎಲ್ ಅಧ್ಯಕ್ಷ ಹರತಾಳು  ಹಾಲಪ್ಪ. ಸದಸ್ಯ ರಾದ ನೆವಟೂರು ದೇವೇಂದ್ರಪ್ಪ ಗೌಡ, ಸುರೇಶ್ ಸಿಂಗ್,ಶಿವಾನಂದಪ್ಪ ಕಾಲೇಜಿನ ಪ್ರಾಚಾರ್ಯ ಎ.ಮಂಜುನಾಥ್, ಕ್ರೀಡಾ ಸಂಚಾಲಕ ಹಾಗೂ ಉಪನ್ಯಾಸಕ  ಸುಬ್ರಹ್ಮಣ್ಯ. ಕಾಲೇಜಿನ ಉಪನ್ಯಾಸಕ ವರ್ಗ ಹಾಗೂ ಸಿಬ್ಬಂದಿ ವರ್ಗ ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ.

ಮುಂದಿನ ದಿನಗಳಲ್ಲಿ ಯುವ ಪ್ರತಿಭೆಗಳು ಇನ್ನಷ್ಟು ಹೆಚ್ಚಿನ ಮಟ್ಟದಲ್ಲಿ ಸಾಧನೆ ತೋರಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲಿ ಎನ್ನುವುದೇ ಪೋಸ್ಟ್ ಮ್ಯಾನ್ ನ್ಯೂಸ್ ಸುದ್ದಿ ಸಂಸ್ಥೆಯ ಆಶಯ….



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

58 minutes ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

1 hour ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

5 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

6 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

20 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

20 hours ago