ಜ.22 ರಿಂದ 27 ರವರೆಗೆ ಜೈನರ ಕಾಶಿ ಹೊಂಬುಜಾ ಮಠದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾರ್ಮಿಕ ಸಭೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜಾ ಕ್ಷೇತ್ರದಲ್ಲಿ  ಅತಿಶಯ ಮಹಾಕ್ಷೇತ್ರದಲ್ಲಿ ಜನವರಿ 22 ರಿಂದ 27 ರವರೆಗೆ ನೂತನ ಮಾನಸ್ತಂಭೋಪರಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮಗಳು ಹೊಂಬುಜ ಜೈನ ದಿಗಂಬರ ಮಠದ ಜಗದ್ಗುರು ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರ ದಿವ್ಯ ಸಾನಿಧ್ಯದಲ್ಲಿ ಜರುಗಲಿದೆ ಎಂದು ಮಠದ ಆಡಳಿತಾಧಿಕಾರಿ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಜನವರಿ 22 ಭಾನುವಾರ :


ಭಾನುವಾರ ಮಧ್ಯಾಹ್ನ 2 ಗಂಟೆಗೆ ಜಿನದತ್ತರಾಯ ಸಭಾ ಮಂಟಪದ ಅರ್ಹದ್ದಾಸ ವೇದಿಕೆಯಲ್ಲಿ ಗಣಾಧಿಪತಿ ಗಣಧರಾಚಾರ್ಯ ಶ್ರೀ 108 ಕುಂಥುಸಾಗರ ಮಹಾರಾಜರ ಪರಮಶಿಷ್ಯರಾದ ನವಗ್ರಹ ತೀಥ ಪ್ರಣೇತ ಪೂಜ್ಯ ರಾಷ್ಟ್ರ ಸಂತ ಅಚಾರ್ಯ 108 ಶ್ರೀ ಗುಣಧರನಂದಿ ಮುನಿಮಹಾರಾಜರು ಮತ್ತು ಸಂತಶಿರೋಮಣು ಅಚಾರ್ಯ ಶ್ರೀ 108 ಪುಣ್ಯ ಸಾಗರ ಮಹಾರಾಜರ ಪಾವನ ಸಾನಿಧ್ಯದಲ್ಲಿ ಮೂಡುಬಿದರೆ ಜೈನಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಮಹಾಸ್ವಾಮಿಜಿ ಮತ್ತು ಸೋಂದಾ ಮಠದ ಸ್ವಸ್ತಿ ಶ್ರೀ ಭಟ್ಟಾಕಲಂಕ ಭಟ್ಟಾರಕ ಮಹಾಸ್ವಾಮಿಜಿ ಹಾಗೂ ಆನಂದಪುರ ಮುರುಘಾರಾಜೇಂದ್ರ ಸಂಸ್ಥಾನ ಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿಯವರ ಗೌರವ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಲಿದೆ.

ಈ ಕಾರ್ಯಕ್ರಮಕ್ಕೆ ಉಚ್ಚನ್ಯಾಯಾಲಯದ ನ್ಯಾಯಮೂರ್ತಿಗಳಾದ ಐ.ಎಂ.ಅರುಣ್, ಉ.ನ್ಯಾ.ನಿ.ನ್ಯಾ.ಅಜಿತಗುಂಜಾಳ, ಐಎಎಸ್ ಅಧಿಕಾರಿ ಮನೋಜ್‌ಜೈನ್, ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಕಮಿಷನರ್ ಜಿನೇಂದ್ರ ಖನಗಾವಿ ಇನ್ನಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.




ಜನವರಿ 23 ಸೋಮವಾರ ;


ಸೋಮವಾರ ಜಿನಕಂಚಿ ಶ್ರೀಕ್ಷೇತ್ರದ ಸ್ವಸ್ತಿ ಶ್ರೀ ಲಕ್ಷ್ಮಿಸೇನ ಭಟ್ಟಾರಕ ಮಹಾಸ್ವಾಮೀಜಿ, ಕೊಲ್ಲಾಪುರದ ಸ್ವಸ್ತಿ ಲಕ್ಷ್ಮಿಸೇನ ಭಟ್ಟಾರಕರು ಹಾಗೂ ಲಕ್ಕವಳ್ಳಿ ವೈಷಭಸೇನ ಭಟ್ಟಾರಕರು ಉಪಸ್ಥಿತಿಯಲ್ಲಿ ಭಾರತೀಯ ಜೈನಮಿಲನ ರಾಷ್ಟ್ರೀಯ ಕಾರ್ಯಾಧ್ಯಕ್ಷ ಧರ್ಮಸ್ಥಳ ಸುರೇಂದ್ರಕುಮಾರ್ ಮತ್ತು ಉಪಾಧ್ಯಕ್ಷರಾದ ಅನಿತಾ ಸುರೇಂದ್ರಕುಮಾರ್,ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ, ಮಹಾರಾಷ್ಟ್ರ ಮಾಜಿ ಸಂಸದ ರಾಜು ಶೆಟ್ಟಿ ಶಿರೂಳ ಭಾಗವಹಿಸುವರು.

ಜನವರಿ 24 ಮಂಗಳವಾರ ;


ಮಂಗಳವಾರ ಮಧ್ಯಾಹ್ನ ಕಾರ್ಕಳದ ಸ್ವಸ್ತಿ ಲಲಿತಕೀರ್ತಿ ಭಟ್ಟಾರಕರು ಮತ್ತು ನಾಂದಣಿ ಸ್ವಸ್ತಿ ಜಿನಸೇನ ಭಟ್ಟಾರಕರ ಗೌರವ ಉಪಸ್ಥಿತಿಯಲ್ಲಿ ಮಾಜಿ ಸಚಿವ ಶಾಸಕ ಕೆ.ಎಸ್.ಈಶ್ವರಪ್ಪ, ಮಹಾರಾಷ್ಟ್ರ ಮಾಜಿ ಸಚಿವ ಶಾಸಕ ರಾಜೇಂದ್ರ ಪಾಟೀಲ, ಮಾಜಿ ಶಾಸಕ ಪ್ರಕಾಶ ಅವಾಡೆ, ಡಿ.ಎಸ್.ಅರುಣ್ ಇನ್ನಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.




ಜನವರಿ 25 ಬುಧವಾರ ;


ಬುಧವಾರ ಕನಕಗಿರಿಯ ಸ್ವಸ್ತಿ ಭವನಕೀರ್ತಿ ಭಟ್ಟಾರಕರು, ಸಿಂಹನಗದ್ದೆ ಲಕ್ಷ್ಮಿಸೇನ ಭಟ್ಟಾರಕರು, ಆರತಿಪುರ ಸಿದ್ದಾಂತಕೀರ್ತಿ ಭಟ್ಟಾರಕರು, ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ.ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ಹೆಗ್ಗಡೆ ಗೌರವ ಉಪಸ್ಥಿತಿಯಲ್ಲಿ ಮುಖ್ಯಅತಿಥಿಗಳಾಗಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಖ್ಯಾತ ವಿದ್ವಾಂಸ ಪ್ರೋ.ನಾಡೋಜ ಹಂಪ ನಾಗರಾಜಯ್ಯ, ಸಂಸದ ಬಿ.ವೈ.ರಾಘವೇಂದ್ರ, ನಳಿನ್‌ಕುಮಾರ್ ಕಟೀಲು, ಸಚಿವರಾದ ವಿ.ಸುನೀಲ್ ಕುಮಾರ್, ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಎಸ್.ರುದ್ರೇಗೌಡರು ಇನ್ನಿತರರು ಭಾಗವಹಿಸುವರು.

ಜನವರಿ 26 ಗುರುವಾರ ;

ಗುರುವಾರ ಮಧ್ಯಾಹ್ನ 2 ಗಂಟೆಗೆ ಶ್ರವಣಬೆಳಗೊಳದ ಜಗದ್ಗುರು ಕರ್ಮಯೋಗಿ ಸ್ವಸ್ತಿ ಚಾರುಕೀರ್ತಿ ಭಟ್ಟಾರಕರು, ಅರಿಹಂತಗಿರಿ ಧವಳಕೀರ್ತಿ ಭಟ್ಟಾರಕರು, ಕಂಬದಹಳ್ಳಿ ಭಾನುಕೀರ್ತಿ ಭಟ್ಟಾರಕರು, ವರೂರು ಧರ್ಮಸೇನ ಭಟ್ಟಾರಕರ ಗೌರವ ಉಪಸ್ಥಿತಿಯಲ್ಲಿ ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ, ಶಾಸಕರಾದ ಇಭಯ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ, ಇನ್ನಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಜನವರಿ 27 ಶುಕ್ರವಾರ ;


ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಹೊಂಬುಜ ಜೈನಮಠದ ಜಗದ್ಗುರು ಸ್ವಸ್ತಿ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ಗೌರವ ಉಪಸ್ಥಿತಿಯಲ್ಲಿ ಬೆಂಗಳೂರು ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಪದ್ಮರಾಜ ಎಸ್ ದೇಸಾಯಿ ಬೆಳ್ತಂಗಡಿ ರತ್ನತ್ರಯ ಜೈನ ತೀರ್ಥ ಕ್ಷೇತ್ರ ಸಮಿತಿ ಅಧ್ಯಕ್ಷ ಜಯವರ್ಮರಾಜ ಬಲ್ಲಾಳ, ಧರ್ಮಸ್ಥಳದ ಡಿ.ಹರ್ಷೇಂದ್ರಕುಮಾರ್ ಇನ್ನಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಮಠದ ಆಡಳಿತಾಧಿಕಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

>

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

7 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

7 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

14 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago