ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದಲ್ಲಿ ಮಾರುತಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂರು ಜನರಿಗೆ ಗಂಭೀರ ಗಾಯಾಗಳಾಗಿರುವ ಘಟನೆ ನಡೆದಿದೆ.
ತ್ಯಾಗರ್ತಿ ಸಮೀಪದ ಅಬಸೆ ಬಳಿಯಲ್ಲಿ ಮಾರುತಿ ಓಮಿನಿ ಕಾರಿನಲ್ಲಿ ಮೂರು ಜನರು ಸಂಚರಿಸುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಈ ಅಪಘಾತದಲ್ಲಿ ಸಾಗರ ನಗರಸಭೆ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಸೇರಿದಂತೆ ಇನ್ನಿಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.ತ್ಯಾಗರ್ತಿ ಯಿಂದ ಸಾಗರ ಕಡೆಗೆ ತೆರಳುತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ಓರ್ವನ ಕಾಲು ಮುರಿದಿದ್ದು, ಅವರನ್ನು ಮಂಗಳೂರಿಗೆ ರವಾನಿಸಿದ್ದಾರೆ ಎನ್ನಲಾಗುತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.