ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ವರ್ಷ ನಡೆದ ನಾಲ್ಕು ದೇವಸ್ಥಾನಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಸಾಗರ ಗ್ರಾಮಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ವರ್ಷ ಫೆಬ್ರುವರಿ 17ಕ್ಕೆ ತಾಲೂಕಿನ ಸಿರಿವಂತೆ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ,ಮೇ 5ಕ್ಕೆ ಬಿಳಿಸಿರಿ ಗ್ರಾಮದ ಕೊರಳಿಕೊಪ್ಪದ ಶನೇಶ್ವರ ದೇವಾಸ್ಥಾನ, ಮೇ 27ರಂದು ಕಳೆದಿ ಹೋಬಳಿಯ ತೆರವಿನಕೊಪ್ಪ ಗ್ರಾಮದ ಅಕ್ಕ ನಾಗಮ್ಮ ದೇವಸ್ಥಾನ ಹಾಗೂ ಅಕ್ಟೋಬರ್ 21ರಂದು ಮಲ್ಲ ಗ್ರಾಮದ ಪಂಚಲಿಂಗೇಶ್ವರ ಹಾಗೂ ಸಿದ್ದೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಪ್ರಕರಣ ಸಾಗರ ಗ್ರಾಮಂತರ ಠಾಣೆಯಲ್ಲಿ ದಾಖಲು ಮಾಡಲಾಗಿತ್ತು.
ಪ್ರಕರಣ ದಾಖಲಿಸಿಕೊಂಡು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಮಿಥುನ್ ಕುಮಾರ್ ಜಿ ಕೆ ಐಪಿಎಸ್ , ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಬೊಮ್ಮರೆಡ್ಡಿ ಮಾರ್ಗದರ್ಶನದಲ್ಲಿ ಸಾಗರ ಉಪವಿಭಾಗ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು ರೋಹನ್ ಜಗದೀಶ್ ಐಪಿಎಸ್ ಸಾರಥ್ಯದಲ್ಲಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪ್ರವೀಣ್ ಕುಮಾರ್ , ಕಾರ್ಗಲ್ ಪೋಲಿಸ್ ಠಾಣಾ ಪಿ ಎಸ್ ಐ ತಿರುಮಲೇಶ್, ಹಾಗೂ ಪಿಎಸ್ಐ ಸುಜಾತ ಒಳಗೊಂಡ ಸಿಬ್ಬಂದಿಗಳ ತಂಡ ರಚನೆ ಮಾಡಿಕೊಂಡು ಕಾರ್ಯಚರಣೆ ನಡೆಸಿ ಇದೇ ತಿಂಗಳು ಜನವರಿ 11ರಂದು ತಾಲೂಕಿನ ಆಚಾಪುರದ ಹತ್ತಿರ ಈ ಮೂರು ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಶಿವಮೊಗ್ಗದ ಮುಸ್ತಫ ಎನ್ನುವ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯಿಂದ 25000 ಬೆಳೆಬಾಳುವ ತಾಮ್ರದ ದೀಪಗಳು, ಗಂಟೆಗಳನ್ನು ಮತ್ತು 35000 ಬೆಳೆಬಾಳುವ ಹೀರೋ ಹೋಂಡಾ ಬೈಕ್ ಅಮಾನತು ಪಡೆಸಿಕೊಂಡಿದ್ದಾರೆ , ಇನ್ನು ಈ ಪ್ರಕರಣದಲ್ಲಿ ಭಾಗಿಯಾಗಿದ ಮತ್ತೋರ್ವ ಆರೋಪಿ ಶಿವಮೊಗ್ಗದ ದರ್ಶನ್ ತಲೆಮರ್ಸಿಕೊಂಡಿದ್ದು ಪೊಲೀಸರು ಬಂಧನಕ್ಕೆ ಜಾಲಂಬಿಸಿದ್ದಾರೆ ಇನ್ನು ಈ ದರ್ಶನ್ ಬಂಧನ ಆದ ನಂತರ ತಾಲೂಕಿನಾದ್ಯಂತ ನಡೆದ ಹಲವು ದೇವಸ್ಥಾನಗಳ ಕಳವು ಪ್ರಕರಣ ಪತ್ತೆಯಾಗುವ ಸಾಧ್ಯತೆಯಿದೆ.
ಸಿ ಹೆಚ್ ಸಿ 66 ಸನಾವುಲ್ಲ,ಸಿಪಿಸಿ 1361 ರವಿಕುಮಾರ್, ಸಿಪಿಸಿ 1101 ಹನುಮಂತ ಜಂಬೂರ್, ಮತ್ತು ಸಿಪಿಐ 1030 ಶ್ರೀನಿವಾಸ್ ರವರು ಭಾಗಿಯಾಗಿದ್ದರು, ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧನ ಮಾಡುವ ಮೂಲಕ ಮಾಲು ಅಮಾನತು ಮಾಡಿರುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ ಕೆ ಐಪಿಎಸ್ ರವರು ಅಭಿನಂದನೆ ಸಲ್ಲಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್