Headlines

ನಾಳೆ(15-01-2023) ರಿಪ್ಪನ್‌ಪೇಟೆಯಲ್ಲಿ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ|Ripponpet

ನಾಳೆ ರಿಪ್ಪನ್‌ಪೇಟೆಯಲ್ಲಿ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಪರ್ಡ್ ಚರ್ಚ್ ಆವರಣದಲ್ಲಿ ಭಾನುವಾರ(15-01-2023) ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಯುವವೇದಿ ಅಧ್ಯಕ್ಷ ರಾಬಿನ್ ತಿಳಿಸಿದ್ದಾರೆ.




ಪಟ್ಟಣದ ಗುಡ್ ಶೆಪರ್ಡ್ ಯುವವೇದಿ ವತಿಯಿಂದ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ರಾಜ್ಯದ ಹಲವಾರು ಜಿಲ್ಲೆಗಳಿಂದ ಅನೇಕ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ.ಗುಡ್ ಶೆಪರ್ಡ್ ಆವರಣದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು ಪ್ರಥಮ ಬಹುಮಾನ 25000/-,ದ್ವಿತೀಯ ಬಹುಮಾನವಾಗಿ 15000/- ಮತ್ತು ತೃತೀಯ ಬಹುಮಾನವಾಗಿ 10000/- ನಿಗದಿಪಡಿಸಲಾಗಿದೆ.




ಈ ಪಂದ್ಯಾವಳಿಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ,ಮಾಜಿ ಶಾಸಕ ಮತ್ತು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ,ಧರ್ಮಗುರು ಫಾದರ್ ಬಿನೋಯ್ ಮತ್ತು ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಭಾಗವಹಿಸುವಂತೆ ಮನವಿ ಮಾಡಿದ್ದಾರೆ.


ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :-

ರಾಬಿನ್ -9535678030
ಜಿತಿನ್ ಕುರಿಯನ್ -8971233568
ಜೊಜೊ -8861643638
ರೋಜನ್ -9008344714



Leave a Reply

Your email address will not be published. Required fields are marked *