ನಾಳೆ ರಿಪ್ಪನ್ಪೇಟೆಯಲ್ಲಿ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಪರ್ಡ್ ಚರ್ಚ್ ಆವರಣದಲ್ಲಿ ಭಾನುವಾರ(15-01-2023) ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಯುವವೇದಿ ಅಧ್ಯಕ್ಷ ರಾಬಿನ್ ತಿಳಿಸಿದ್ದಾರೆ.
ಪಟ್ಟಣದ ಗುಡ್ ಶೆಪರ್ಡ್ ಯುವವೇದಿ ವತಿಯಿಂದ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ರಾಜ್ಯದ ಹಲವಾರು ಜಿಲ್ಲೆಗಳಿಂದ ಅನೇಕ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ.ಗುಡ್ ಶೆಪರ್ಡ್ ಆವರಣದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು ಪ್ರಥಮ ಬಹುಮಾನ 25000/-,ದ್ವಿತೀಯ ಬಹುಮಾನವಾಗಿ 15000/- ಮತ್ತು ತೃತೀಯ ಬಹುಮಾನವಾಗಿ 10000/- ನಿಗದಿಪಡಿಸಲಾಗಿದೆ.
ಈ ಪಂದ್ಯಾವಳಿಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ,ಮಾಜಿ ಶಾಸಕ ಮತ್ತು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ,ಧರ್ಮಗುರು ಫಾದರ್ ಬಿನೋಯ್ ಮತ್ತು ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಭಾಗವಹಿಸುವಂತೆ ಮನವಿ ಮಾಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್