ಶಿವಮೊಗ್ಗದ ಕುಂಸಿ ಬಳಿಯ ಕೆರೆ ಎರಿ ಮೇಲೆ ಶ್ರೀನಿವಾಸ್ ಬಸ್ ಹಾಗೂ ಬೈಕ್ ನಡುವೆ ರಸ್ತೆ ಅಪಘಾತ ವಾಗಿದ್ದು ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ವರದಿಯಾಗಿದೆ.
ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಹೋಗುತ್ತಿದ್ದ ಶ್ರೀನಿವಾಸ್ ಬಸ್ ಹಾಗೂ ಹೊಸನಗರ ದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬೈಕ್ ಗಳ ನಡುವೆ ಈ ಘಟನೆ ನಡೆದಿದೆ.
ಮೃತಪಟ್ಟ ಯುವಕರು ಶಿವಮೊಗ್ಗದ ಗುರುಪುರ ಮತ್ತು ಇಂದಿರಾ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ.
ಮೃತದೇಹವನ್ನು ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.