ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಹೊಸನಗರದ ಲಾಡ್ಜ್ ನಲ್ಲಿ ಸಾವು|real

ಹೊಸನಗರ : ಬೆಂಗಳೂರು ಜಿಲ್ಲೆಯ ಆಡುಗೋಡಿ ಆನೆಪಾಳ್ಯದ ರಿಯಲ್ ಎಸ್ಟೇಟ್ ಉದ್ಯಮಿ ಹೊಸನಗರದ ಖಾಸಗಿ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.





ಮೃತಪಟ್ಟ ವ್ಯಕ್ತಿ ಮುನಿರಾಜು (48) ಬೆಂಗಳೂರು ಮೂಲದವರಾಗಿದ್ದು ಕುಟುಂಬ ಸಮೇತ ದೇವರ ದರ್ಶನಕ್ಕೆ ಬಂದಿದ್ದರು.

ಜನವರಿ 4ರಂದು ಪುಣ್ಯಕ್ಷೇತ್ರಗಳ ಭೇಟಿಗೆ ಎಂದು ಪತ್ನಿ ಹಾಗೂ ಮಕ್ಕಳೊಂದಿಗೆ ಕಾರಿನಲ್ಲಿ ಬೆಂಗಳೂರಿನಿಂದ ಬೆಳಿಗ್ಗೆ ಹೊರಟು ಹೊರನಾಡು ಶೃಂಗೇರಿ ಕ್ಷೇತ್ರದ ದರ್ಶನ ಮಾಡಿ ಹೊಸನಗರ ಬರುವಾಗ ರಾತ್ರಿ ಆಗಿದ್ದ ಕಾರಣ ಪಟ್ಟಣದ ಖಾಸಗಿ ಲಾಡ್ಜ್ ನಲ್ಲಿ ರೂಮ್ ಮಾಡಿ ಉಳಿದಿದ್ದರು.




ಜನವರಿ 5ರ ಬೆಳಿಗ್ಗೆ 6:45 ಸಮಯದಲ್ಲಿ ಮುನಿರಾಜು ಎದೆ ಉರಿ ಎಂದು ಪತ್ನಿ ಬಳಿ ಹೇಳಿದ್ದು ಅಸಿಡಿಟಿ ಇರಬಹುದೇನೋ ಎಂದು ಆತಂಕ ವ್ಯಕ್ತಪಡಿಸಿ ತಕ್ಷಣ ರೂಮ್ ಬಾಯ್ ಸಹಾಯದಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಮುನಿರಾಜುರವರನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ತೀವ್ರ ಹೃದಯಘಾತದಿಂದ ಮೃತಪಟ್ಟಿರುವದಾಗಿ ತಿಳಿಸಿದ್ದಾರೆ.

ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು ಹೊಸನಗರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ

RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿಯಾಗಿ ಫಾರೂಕ್ ಆಯ್ಕೆ Ripponpete Eid Milad Committee…

2 hours ago

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ

ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ Nagarahalli Nagendra Swamy Temple in Hosanagara taluk celebrated Nagara…

3 hours ago

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ

ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಆ.19ರಂದು ‘ಶಿಕಾರಿಪುರ ಚಲೋ’ ಹಾಗೂ ಬಂದ್‌ಗೆ ಕರೆ VHP and Bajrang Dal…

4 hours ago

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ

ತಾಯಿ-ಮಗಳ ಜೀವ ಉಳಿಸಿದ ಮೂವರು ಯುವಕರಿಗೆ ಪೊಲೀಸ್ ಇಲಾಖೆಯಿಂದ ಗೌರವ ಸನ್ಮಾನ Three youths rescued a mother and…

4 hours ago

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

1 day ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

1 day ago