POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಮಕ್ಕಳ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತಿದ್ದ ಇಬ್ಬರ ವಿರುದ್ದ ಪ್ರಕರಣ ದಾಖಲು|CEN


ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರ ವಿರುದ್ಧ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಕ್ಕಳ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿರುವ ಕುರಿತು ಅಮೆರಿಕಾದ ಸೈಬರ್ ಟಿಪ್ ಲೈನ್ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ಶಿವಮೊಗ್ಗದ ಸಿಇಎನ್ ಶಿಕಾರಿಪುರ ಹಾಗೂ ಭದ್ರಾವತಿ ತಾಲೂಕಿನ ತಲಾ ಒಬ್ಬರ ಮೇಲೆ ಕೇಸು ದಾಖಲಿಸಲಾಗಿದೆ.



ಮಕ್ಕಳ ಅಶ್ಲೀಲ ಫೋಟೊ ಹಾಗೂ ವಿಡಿಯೋಗಳನ್ನು ನೋಡುವುದು, ಸಾಮಾಜಿಕ ಜಾಲತಾಣಗಳಲ್ಲಿ ನೋಡುವುದು, ವಿಡಿಯೋ ಕಳುಹಿಸುವುದು ಮತ್ತು ಮಾಡುವುದು ನಿಷೇಧಿತವಾಗಿದೆ. ಹೀಗಿದ್ದರೂ ಫೋಟೋಗಳನ್ನು ಅಪ್ಲೋಡ್ ಮಾಡುವುದನ್ನು ಮಾಡಿದರೆ ಅವರ ವಿರುದ್ಧ ಸೈಬರ್ ಕ್ರೈಂ ಕಾಯ್ದೆಯಡಿ ಪ್ರಕರಣ ದಾಖಲಿಸಬಹುದಾಗಿದೆ.

ಮಕ್ಕಳ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸರ್ಚ್ ಹಾಗೂ ಅಪ್ಲೋಡ್ ಮಾಡುವವರ ಮೇಲೆ ಅಮೆರಿಕಾದ ಟಿಪ್ ಲೈನ್ ಎಂಬ ಸಂಸ್ಥೆಯು ಹದ್ದಿನ ಕಣ್ಣಿಟ್ಟು, ಗಮನಿಸುತ್ತಿರುತ್ತದೆ. ಈ ಸಂಸ್ಥೆಯು ನೀಡಿದ ಮಾಹಿತಿ ಮೇರೆಗೆ ಶಿವಮೊಗ್ಗ ಸಿಇಎನ್ ಪೊಲೀಸರು ಇಬ್ಬರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.