January 11, 2026

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ – ನಳಿನ್ ಕುಮಾರ್ ಕಟೀಲ್

ರಿಪ್ಪನ್‌ಪೇಟೆ : ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಕ್ಕೂ ಅಧಿಕ ಸ್ಥಾನವನ್ನು ಬಿಜೆಪಿ‌ ಪಕ್ಷ ಗೆಲ್ಲಲಿದೆ ಎಂದು ಮಂಗಳೂರು ಲೋಕಸಭಾ ಸದಸ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ ಹೇಳಿದರು.




ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ನಂತರ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿ ಬಿಜೆಪಿ ಪಕ್ಷದಲ್ಲಿ ಆಂತರಿಕ ಕಲಹ ಇದೆ ಎನ್ನುವುದು ವಿರೋಧ ಪಕ್ಷಗಳು ಕಟ್ಟಿರುವ ಕಪೋಕಲ್ಪಿತ ಕಥೆಯಾಗಿದ್ದು ನಮ್ಮಲ್ಲಿ ಯಾವುದೇ ತರಹದ ಭಿನ್ನಮತವಿಲ್ಲ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಕೂ ಹೆಚ್ಚು ಸ್ಥಾನ ಪಡೆಯುವ ಮೂಲಕ ರಾಜ್ಯದ ಜನತೆಗೆ ಸುಭದ್ರ ಸರ್ಕಾರ ನೀಡುತ್ತೇವೆ ಎಂದರು.


ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಮಾದ್ಯಮದವರ ಪ್ರಶ್ನೆಗೆ ನಮ್ಮಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬ ಚರ್ಚೆಯೇ ಇಲ್ಲ ಅದನ್ನು ಯಡಿಯೂರಪ್ಪ ಮತ್ತು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು.



About The Author

Leave a Reply

Your email address will not be published. Required fields are marked *

Exit mobile version