ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಮಾಡಿದ್ದ ಮುಖ್ಯ ಶಿಕ್ಷಕಿ ವರ್ಗಾವಣೆ ವಿರೋಧಿಸಿ ಪೋಷಕರು, ಮಕ್ಕಳಿಂದ ಹೋರಾಟ ನಡೆದು ಮಕ್ಕಳು ಸರ್ಕಾರಿ ಶಾಲೆಗೆ ಬೇಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಹೆಗ್ಗೋಡು ಸರ್ಕಾರಿ ಶಾಲೆಯಲ್ಲಿ ನಡೆದಿದ್ದು ಇಡೀ ಶಿಕ್ಷಣ ಇಲಾಖೆಯ ಅವೈಜ್ಞಾನಿಕ ನಡೆಗೆ ಉದಾಹರಣೆ ಆಗಿದೆ.
ಖಾಸಗಿ ಶಾಲೆಯ ಪೈಪೋಟಿ ಮುಂದೆ ಇದೀಗ ಸರ್ಕಾರದ ನಡೆಯಿಂದ ಬಡ ಮಕ್ಕಳ ಬದುಕು ಕತ್ತಲೆಗೆ ಸರಿದಿದೆ.
ಹೌದು. ಸರ್ಕಾರಿ ಶಾಲೆಯನ್ನು ಕಟ್ಟಿ ಬೆಳೆಸಿ ಬಡ ಮಕ್ಕಳ ಬದುಕನ್ನು ಹಸನಾಗಿಸುವ ಮುಖ್ಯ ಶಿಕ್ಷಕಿ ವರ್ಗಾವಣೆ ಖಂಡಿಸಿ 95ಕ್ಕೂ ಹೆಚ್ಚು ಮಕ್ಕಳು ತಮ್ಮ ಪೋಷಕರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.
ಹೆಗ್ಗೋಡು ಶಾಲೆಯಲ್ಲಿ ಶಾಲೆಗೆ ಬೀಗ ಹಾಕಿ ಮಕ್ಕಳೇ ಪ್ರತಿಭಟನೆ ನಡೆಸಿ ಇದೀಗ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ ಅಪರೂಪದ ಘಟನೆ ನಡೆದಿದೆ. ಜೊತೆಗೆ ಯಾವುದೇ ಮಕ್ಕಳು ಶಾಲೆಗೆ ಬರುವುದಿಲ್ಲ ಎಂದು ಹಠ ಹಿಡಿದು ಶಾಲೆಯ ಮುಂದೆ ಧರಣಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಆಗಮಿಸಿ ಮನವಿ ಸ್ವೀಕಾರ ಮಾಡಿದ್ದಾರೆ. ಸರ್ಕಾರ ಅಭಿವೃದ್ಧಿ ಹೊಂದುತ್ತಿರುವ ಸರಕಾರಿ ಶಾಲೆಯನ್ನು ಮುಖ್ಯ ಶಿಕ್ಷಕಿ ಶ್ರೀದೇವಿ ಅವರ ವರ್ಗಾವಣೆ ಮಾಡುವ ಮೂಲಕ ಸರ್ಕಾರ ಮಕ್ಕಳ ಭವಿಷ್ಯಕ್ಕೆ ಕುತ್ತು ತಂದಿದೆ.. ಕೂಡಲೇ ವರ್ಗಾವಣೆ ಹಿಂಪಡೆಯಬೇಕು.
ಕಾನೂನು ಪ್ರಕಾರ ಶಾಲೆಗೆ 4 ಶಿಕ್ಷಕರು ಬೇಕು. ಆದರೆ ಇರುವ ಶಿಕ್ಷಕರನ್ನೇ ತೆಗೆಯಲು ಹೊರಟಿದೆ. ಶಾಲೆಯನ್ನು ಅತ್ಯಂತ ಅಭಿವೃದ್ಧಿ ಮಾಡಿ ಮಕ್ಕಳ ಭವಿಷ್ಯ ರೂಪಿಸಿರುವ ಶಿಕ್ಷಕಿಯನ್ನು ವರ್ಗಾವಣೆ ಮಾಡಿದರೆ ನಾವು ನಮ್ಮ ಮಕ್ಕಳನ್ನು ಈ ಶಾಲೆಗೆ ಕಳುಹಿಸುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದ ಘಟನೆ ಕೂಡ ನಡೆಯಿತು.
ಬೇಡಿಕೆ ಈಡೇರಿಸುವವರೆಗೆ ಮಕ್ಕಳನ್ನು ಶಾಲೆಗೆ ಕಳುಹಿಸಲ್ಲ ಎಂದು ಪೋಷಕರು ಬಿಇಒ ಕಚೇರಿ ಪ್ರತಿಭಟನೆಗೆ ಸಿದ್ದರಾಗಿದ್ದಾರೆ. ಪ್ರತಿಭಟನೆ ವೇಳೆ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಹೇಂದ್ರ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು, ಪೋಷಕರು ಹಾಜರಿದ್ದರು.