ಯುವಕನ ಮೇಲೆ ಪೊಲೀಸರಿಂದ ಹಲ್ಲೆ – ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ|assault

ಶಿಕಾರಿಪುರ : ಪೊಲೀಸರು ಯುವಕನ‌ ಮೇಲೆ ಹಲ್ಲೆ ನೆಡೆಸಿದ್ದಾರೆ ಎಂದು ಮನನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಅರಶಿಣಗೆರೆಯಲ್ಲಿ ನೆಡೆದಿದೆ.




ಅರಶಿಣಗೆರೆ ಸಚ್ಚಿನ್‌ (24) ವಿಷ ಸೇವಿಸಿದ ಯುವಕ.

ಕಳೆದ ಎರಡು ದಿನಗಳ ಹಿಂದೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಯುವಕನ ಮೇಲೆ ಏಕಾಏಕಿ ಪೊಲೀಸರು ಹಲ್ಲೆ ಮಾಡಿದ್ದೂ ಊರಿನ ಜನರ ಮುಂದೆ ಅವಮಾನ ಸಹಿಸದೆ ಯುವಕ ಸಚಿನ್ ವಿಷ ಸೇವನೆ ಮಾಡಿದ್ದಾನೆ.

ವಿಷಯ ತಿಳಿದ ತಕ್ಷಣ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸದ್ಯಕ್ಕೆ ಪ್ರಾಣಾಪಾಯದಿಂದ ಸಚಿನ್ ಪಾರಾಗಿದ್ದು ಹಲ್ಲೆಗೆ ಕಾರಣ ತಿಳಿಸುವಂತೆ  ಗ್ರಾಮದ ಯುವಕರು ಪಟ್ಟು ಹಿಡಿದಿದ್ದಾರೆ.




ಅಷ್ಟೇ ಅಲ್ಲದೆ ಬಿಜೆಪಿ ಸ್ಥಳೀಯ ನಾಯಕನ ಕುಮ್ಮಕ್ಕಿನಿಂದ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕುಟುಂಬಸ್ಥರು ದೂರು ನೀಡಿದರೆ ಪೊಲೀಸರಿಂದ ದೂರು ದಾಖಲು ಮಾಡಲು ನಿರಾಕರಣೆ ಮಾಡಲಾಗಿದ್ದು ಪೊಲೀಸರ ನಡೆಗೆ ಕುಟುಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು

ಶಿವಮೊಗ್ಗ: ನಕಲಿ ಸರ್ಕಾರಿ ದಾಖಲೆ ಸೃಷ್ಟಿಸಿ ವಂಚನೆ — ಆರೋಪಿಗೆ 5 ವರ್ಷ ಕಠಿಣ ಜೈಲು Shivamogga court sentences…

1 hour ago

ಸಾಗರದಲ್ಲಿ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ಕಾರು ಪಲ್ಟಿ

ಸಾಗರದಲ್ಲಿ ನಿಯಂತ್ರಣ ತಪ್ಪಿ ಸ್ಕಾರ್ಪಿಯೋ ಕಾರು ಪಲ್ಟಿ Scorpio car overturns near Ganapathi Kere in Sagara after…

1 hour ago

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ ಡಿಟೇಲ್ಸ್

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ…

11 hours ago

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ Police rescue a minor…

18 hours ago

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…

1 day ago

ತಂದೆ–ಮಗನ ಜಗಳ ಕೊಲೆಯಲ್ಲಿ ಅಂತ್ಯ; ಮೃತದೇಹ ಬಾವಿಗೆ ಎಸೆದ ಆರೋಪ

ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ A man…

1 day ago