Headlines

ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ..!!! ತೀರ್ಥಹಳ್ಳಿಯ ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ,57 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

2019 ನೇ ಸಾಲಿನಲ್ಲಿ 26 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ನೊಂದ ಯುವತಿಯ ತಾಯಿ ನೀಡಿದ್ದರು. ಈ ದೂರಿನ ಮೇರೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಪೊಲೀಸ್​ ಠಾಣೆಯೊಂದರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸದ್ಯ ಪ್ರಕರಣದ ತೀರ್ಪು ಹೊರಬಿದ್ದಿದೆ.

11111



ಸಂಬಂಧ  ತನಿಖಾಧಿಕಾರಿಗಳಾದ ಜಿ.ವಿ. ಗಣೇಶಪ್ಪ, ಪೊಲೀಸ್ ವೃತ್ತ ನಿರೀಕ್ಷಕರು, ತೀರ್ಥಹಳ್ಳಿ ವೃತ್ತ (ಹಾಲಿ ನಿವೃತ್ತಿ) ರವರು ಪ್ರಕರಣದ ತನಿಖೆ ಕೈಗೊಂಡು ಆರೋಪಿತನ ವಿರುದ್ಧ  ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿತ್ತು.




ವಿಚಾರಣೆ ಮುಗಿದಿದ್ದು, ನಿನ್ನೆ 27-01-2023 ರಂದು ನ್ಯಾಯಧೀಶರಾದ ಮಾನು ಕೆ. ಎಸ್ ರವರು ತೀರ್ಪು ಪ್ರಕಟಿಸಿದ್ದಾರೆ. ಆರೋಪಿತನ ವಿರುದ್ಧ ಕಲಂ 376(1), 506 ಮತ್ತು 450 IPC ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ  37 ವರ್ಷದ ಯುವಕನಿಗೆ 10 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 57,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ  ಆದೇಶ ನೀಡಿದ್ದಾರೆ.



Leave a Reply

Your email address will not be published. Required fields are marked *

Exit mobile version