ರಿಪ್ಪನ್‌ಪೇಟೆ : ರಾಜ್ಯದಲ್ಲಿ ಬದಲಾವಣೆ ತರುವ ದೃಷ್ಟಿಯಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ತಿಳಿಸಿದ್ದಾರೆ.
ಸೋಮವಾರ ಪಟ್ಟಣದಲ್ಲಿ ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷ ಆಯೋಜಿಸಿದ್ದ ಬೃಹತ್ ಬೈಕ್ ರ್‍ಯಾಲಿಯಲ್ಲಿ ಪಾಲ್ಗೊಂಡು ನಂತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು 10 ವರ್ಷಗಳ ಹಿಂದೆ ಸ್ಥಾಪನೆಯಾದ ಪಕ್ಷವು ಇಂದು ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದ್ದು, ದೆಹಲಿ ಹಾಗೂ ಪಂಜಾಬ್‌ನಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿದ್ದು, ಉತ್ತಮ ಆಡಳಿತ ನೀಡುತ್ತಿರುವುದರಿಂದ ಜನರ ವಿಶ್ವಾಸಗಳಿಸಿದೆ. ಇತ್ತೀಚೆಗೆ ನಡೆದ ಗುಜರಾತ್, ಗೋವಾ ರಾಜ್ಯದ ಚುನಾವಣೆಯಲ್ಲೂ ನಮ್ಮ ಪಕ್ಷ ಖಾತೆ ತೆರೆದಿದೆ. ಗ್ರಾಮ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ಇತರೆ ಚುನಾವಣೆಗಳಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾ ಬಂದಿದ್ದಾರೆ. ಕರ್ನಾಟಕ ಸೇರಿದಂತೆ ಮುಂಬರುವ 9 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲೂ ಪಕ್ಷ ಸ್ಪರ್ಧಿಸಲಿದೆ ಎಂದರು.
ರಾಜ್ಯದಲ್ಲಿ ರಾಜಕೀಯ ನಾಯಕರು ವೈಯಕ್ತಿಕ ಟೀಕೆಗಳನ್ನು ಮಾಡುತ್ತಾ ಕಬಡ್ಡಿ ಆಡುತ್ತಿದ್ದಾರೆ. ಇದು ಸರಿಯಲ್ಲ. ನಮ್ಮ ಪಕ್ಷ ಕೀಳುಮಟ್ಟದಲ್ಲಿ ರಾಜಕೀಯ ಮಾಡುವುದಿಲ್ಲ. ಜನರ ತೆರಿಗೆಯಿಂದ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ವಿದ್ಯುತ್ ಸಮರ್ಪಕವಾಗಿ ನಿಭಾಯಿಸಿ ಮುಂದಿನ ಪೀಳಿಗೆಯ ದೃಷ್ಟಿಯಿಂದ ಕಾರ್ಯನಿರ್ವಹಿಸಲಿದೆ ಎಂದರು.
ಸಾಗರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಅಭ್ಯರ್ಥಿ ದಿವಾಕರ್ ಮಾತನಾಡಿ ಜಿಲ್ಲೆಯಲ್ಲಿ ಆಮ್ ಆದ್ಮಿ ಪಕ್ಷ ಸಂಘಟಿತವಾಗುತಿದ್ದು ಮುಂದಿನ ಚುನಾವಣೆಯಲ್ಲಿ ಎಲ್ಲಾರೂ ಆಶ್ಚರ್ಯ ಪಡುವಂತಹ ಪಲಿತಾಂಶ ಬರುತ್ತದೆ.ನಂತರದ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಸಾಗರ ಕ್ಷೇತ್ರದಿಂದ ಹರತಾಳು ಹಾಲಪ್ಪರಿಗೆ ಸಹಕಾರ ನೀಡಲು ಸ್ಪರ್ಧಿಸುವ ದರ್ದು ನನಗಿಲ್ಲ. ವಕೀಲ ವೃತ್ತಿಯಲ್ಲಿ ಶ್ರೇಷ್ಠತೆ ಕಾಪಾಡಿಕೊಂಡು ಬಂದ ನನಗೆ, ಸಾಮಾಜಿಕವಾಗಿ, ರಾಜಕೀಯವಾಗಿ ಹಾಲಪ್ಪ ಸೇರಿದಂತೆ ಯಾರು ಸಮರಲ್ಲ ಎಂದು ಹೇಳಿದರು.
ಈ ಸಂಧರ್ಭದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಿವಕುಮಾರ್ ,ತಾಲೂಕ್ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಗಣೇಶ್ ಸೂಗೋಡು ,ರಿಪ್ಪನ್‌ಪೇಟೆ ಜಿಪಂ ಅಭ್ಯರ್ಥಿ ಸಂತೋಷ್ ಆಶ್ರೀತಾ ,ಉಪಾಧ್ಯಕ್ಷರಾದ ಹಸನಬ್ಬ,ಯುವ ಘಟಕದ ಅಧ್ಯಕ್ಷ ಚೇತನ್ ಸೇರಿದಂತೆ ಅನೇಕರು ಇದ್ದರು.
ಬೃಹತ್ ಬೈಕ್ ರ್‍ಯಾಲಿ :
ಸಮಾವೇಶಕ್ಕೂ ಮುಂಚೆ ಪಟ್ಟಣದ ನಾಲ್ಕುಮುಖ್ಯ ರಸ್ತೆಗಳಲ್ಲಿ ಬೃಹತ್ ಬೈಕ್ ರ್‍ಯಾಲಿನಡೆಯಿತು,ಭಾಸ್ಕರ್ ರಾವ್ ಹಾಗೂ ದಿವಾಕರ್ ರವರ್ನ್ನು ತೆರೆದ ಜೀಪಿನಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ರ್ಯಾಲಿಯಲ್ಲಿ ಕೆರೆಹಳ್ಳಿ ಹೋಬಳಿಯ 500 ಕ್ಕೂ ಹೆಚ್ಚು ಬೈಕ್ ನಲ್ಲಿ ಯುವಕರು ಪಾಲ್ಗೊಂಡಿರುವುದು ಈ ಭಾಗದಲ್ಲಿ ಪಕ್ಷ ಸಂಘಟನೆಯಾಗುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಜಿಪಂ ಅಭ್ಯರ್ಥಿ ಸಂತೋಷ್ ಆಶ್ರಿತಾ ಸಂತಸ ವ್ಯಕ್ತಪಡಿಸಿದ್ದಾರೆ.