ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬೆನವಳ್ಳಿ ಗ್ರಾಮದಲ್ಲಿ ಜಿಂಕೆ ಭೇಟೆಯಾಡಿ ಮಾಂಸವನ್ನು ಬಳಸಿಕೊಳ್ಳುತಿದ್ದ ಆರೋಪದಲ್ಲಿ ಓರ್ವನನ್ನು ಬಂಧಿಸಿದ್ದಾರೆ.
ಬೆನವಳ್ಳಿ ಗ್ರಾಮದ ಮನೋಹರ್ (34) ಬಂಧಿತ ಆರೋಪಿ.ಇನ್ನೋರ್ವ ಆರೋಪಿ ಬೆನವಳ್ಳಿ ಗ್ರಾಮದ ವಿನಯ್ (26) ಪರಾರಿಯಾಗಿದ್ದಾನೆ.
ಮಾಂಸ ಮಾಡುವ ಉದ್ದೇಶದಿಂದ ಜಿಂಕೆಯನ್ನು ಭೇಟೆ ಮಾಡಿರುವ ಮಾಹಿತಿಯ ಹಿನ್ನಲೆಯಲ್ಲಿ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಬೆನವಳ್ಳಿ ಗ್ರಾಮದ ಸನಂ 10|06 ರಲ್ಲಿ ಜಿಂಕೆ ಮಾಂಸ ಪತ್ತೆಯಾಗಿದೆ.ಈ ಹಿನ್ನಲೆಯಲ್ಲಿ ಆರೋಪಿ ಮನೋಹರ್ ನನ್ನು ವಶಕ್ಕೆ ಪಡೆದಿದ್ದು ಇನ್ನೋರ್ವ ಆರೋಪಿ ವಿನಯ್ ಬಂಧನಕ್ಕೆ ಬಲೆ ಬೀಸಿದ್ದಾರೆ.
ಎಸಿಎಫ಼್ ಸುಬ್ರಹ್ಮಣ್ಯ ಇವರ ಮಾರ್ಗದರ್ಶನದಲ್ಲಿ RFO ರಾಜೇಂದ್ರ ಪ್ರಸಾದ್ ನೇತ್ರತ್ವದಲ್ಲಿ ಉಪ ವಲಯಾಧಿಕಾರಿ ಹರೀಶ್ ,ಬೀಟ್ ಫಾರೆಸ್ಟರ್ ಅನಿಲ್ ರಾಥೋಡ್ , ಅರಣ್ಯ ವೀಕ್ಷಕರಾದ ಹಾಲಪ್ಪ ಮತ್ತು ವಾಹನ ಚಾಲಕ ಯೋಗೇಂದ್ರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.