ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ ವಿಧಾನ ಸಭೆ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ವಿವಿಧೆಡೆ ಪಥ ಸಂಚನಲ ನಡೆಸಿದರು.
ವಿಧಾನ ಸಭೆ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಪಟ್ಟಣದ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE MARCH) ಆಯೋಜಿಲಾಗಿತ್ತು.ಪಟ್ಟಣದ ನಾಲ್ಕು ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಸಲಾಯಿತು.
ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನಸುತಾರ, ಆರ್.ಎ.ಎಪ್ ಡೆಪ್ಯೂಟಿ ಕಮಾಂಡೆಂಡ್ ನಯನ ನಂದಿ,ಹೊಸನಗರ ಸಿಪಿಐ ಗಿರೀಶ್ ಬಿ ಸಿ ಮತ್ತು ಪಿಎಸೈ ಶಿವಾನಂದ ಕೆ ಅವರ ನೇತೃತ್ವದಲ್ಲಿ ಪಥ ಸಂಚಲನ ನಡೆಸಲಾಯಿತು.
ನಂತರ ಪಟ್ಟಣದ ಸಮೀಪದ ಕೆಂಚನಾಲ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಪಥ ಸಂಚಲನ (ROUTE MARCH) ನಡೆಸಲಾಯಿತು.