ರಿಪ್ಪನ್‌ಪೇಟೆ : ಪಟ್ಟಣದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಪಟ್ಟಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಜಾಥಾ ನಡೆಸಿದರು.
ಪಟ್ಟಣದ ವಿನಾಯಕ ವೃತ್ತ ಮತ್ತು ನಾಲ್ಕು ಮುಖ್ಯ ರಸ್ತೆಗಳಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು ಮೆರವಣಿಗೆ ನಡೆಸಿದರು.
ಸಪ್ತಾಹಕ್ಕೆ ಚಾಲನೆ ನೀಡಿದ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೆ ಮಾತನಾಡಿ, ವಾಹನ ಚಲಿಸುವಾಗ ಮದ್ಯಪಾನ ಮಾಡಕೂಡದು. ಮೊಬೈಲ್‌ನಲ್ಲಿ ಮಾತನಾಡಬಾರದು. ನಿಯಮಿತ ವೇಗದಲ್ಲೆ ವಾಹನಗಳನ್ನು ಓಡಿಸಬೇಕು, ವಾಹನ ಸವಾರರು ಅಗತ್ಯ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಪಾದಚಾರಿಗಳು ರಸ್ತೆಯಲ್ಲಿ ಚಲಿಸುವಾಗ ರಸ್ತೆ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದರು.
ರಸ್ತೆ ಸುರಕ್ಷತೆಯನ್ನು ಕೇವಲ ಒಂದು ವಾರದ ಮಟ್ಟಿಗೆ ಸೀಮಿತಗೊಳಿಸದೆ ನಿರಂತರವಾಗಿ ನಡೆಸಬೇಕಿದೆ. ಆವಾಗ ಮಾತ್ರ ಇದರ ಪ್ರತಿಫಲ ಸಿಗಲಿದೆ. ಅಪಘಾತ ನಡೆದಾಗ ವೀಡಿಯೋ ಚಿತ್ರೀಕರಣ ಮಾಡುವ ಬದಲು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಬೇಕು. ಒಂದು ಜೀವವನ್ನು ಉಳಿಸಿದರೆ ಒಂದಿಡೀ ಕುಟುಂಬವನ್ನು ಉಳಿಸಿದಂತೆ. ಯಾಕೆಂದರೆ ಒಂದು ಜೀವವನ್ನು ನಂಬಿ ಅದೆಷ್ಟೋ ಕುಟುಂಬಗಳು ಜೀವನ ಸಾಗಿಸುತ್ತದೆ. ಆ ಪ್ರಜ್ಞೆ ಪ್ರತಿಯೊಬ್ಬರಲ್ಲೂ ಇರಬೇಕಿದೆ ಎಂದರು.
ಅಧಿಕೃತ ವರದಿಯೊಂದರ ಪ್ರಕಾರ ಇಂದು ಜಗತ್ತಿನಲ್ಲಿ ವರ್ಷಕ್ಕೆ 1.2 ಮಿಲಿಯನ್ ಜನರು ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆಯುತ್ತಿದ್ದಾರೆ. ಅಲ್ಲದೆ 20ರಿಂದ 30 ಮಿಲಿಯನ್‌ನಷ್ಟು ಅಪಘಾತದಲ್ಲಿ ಗಾಯಾಳುಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಎ ಎಸ್ ಐ ಮಂಜಪ್ಪ ಸಿಬ್ಬಂದಿಗಳಾದ ಬಸವರಾಜ್ ,ಯೋಗೇಂದ್ರ,ಶಿವಕುಮಾರ್ ನಾಯ್ಕ್ ,ಉಮೇಶ್ ಮತ್ತು ಮಧುಸೂಧನ್ ಇದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್