ರಿಪ್ಪನ್‌ಪೇಟೆ – ಶಾಲಾ ಮಕ್ಕಳ ಪ್ರವಾಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ
ರಿಪ್ಪನ್‌ಪೇಟೆ : ಇಲ್ಲಿನ ಬೆನವಳ್ಳಿ ಗ್ರಾಮದಲ್ಲಿ ಶಾಲಾ ಮಕ್ಕಳ ಪ್ರವಾಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ.
ಬೆನವಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಶಾಲಾ ಮಕ್ಕಳನ್ನು ಕೊಡಚಾದ್ರಿ ಬೆಟ್ಟಕ್ಕೆ ಪ್ರವಾಸ ಕರೆದೊಯ್ದು ವಾಪಾಸ್ ಶಿವಮೊಗ್ಗ ಕಡೆಗೆ ತೆರಳುತಿದ್ದ ವಿಜಯಲಕ್ಷ್ಮಿ ಬಸ್ ಹಾಗೂ ಶಿವಮೊಗ್ಗದಿಂದ ಹೊಂಬುಜ ದೇವಸ್ಥಾನಕ್ಕೆ ಹೊರಟಿದ್ದ ಮಾರುತಿ ಬಲೆನೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಈ ರಸ್ತೆ ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಏರ್ ಬ್ಯಾಗ್ ಸರಿಯಾಗಿ ಕಾರ್ಯನಿರ್ವಹಿಸಿದ್ದರಿಂದ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ.
ಬಸ್ ನಲ್ಲಿದ್ದ ವಿದ್ಯಾರ್ಥಿಗಳು ಅಪಘಾತದಿಂದ ಗಾಬರಿಗೊಂಡಿದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.