ರಿಪ್ಪನ್‌ಪೇಟೆ : ಸರ್ಕಾರಿ ಹಾಸ್ಟೆಲ್ ನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಕರಣ – ಗ್ರಾಪಂ ಅಧ್ಯಕ್ಷರು ,ಉಪಾಧ್ಯಕ್ಷರ ಸದಸ್ಯತ್ವ ವಜಾಕ್ಕೆ ಆಮ್ ಆದ್ಮಿ ಮನವಿ|AAP

ರಿಪ್ಪನ್‌ಪೇಟೆ : ಇಲ್ಲಿನ ಬಿಸಿಎಂ ವಿದ್ಯಾರ್ಥಿನಿ ನಿಲಯದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಸದಸ್ಯತ್ವ ಅಭಿಯಾನ ನಡೆಸಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸದಸ್ಯತ್ವವನ್ನು ಕೂಡಲೇ ವಜಾ ಮಾಡುವಂತೆ ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ನಾಡಕಛೇರಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.




ಮನವಿ ಸಲ್ಲಿಸಿ ಮಾತನಾಡಿದ ಹೊಸನಗರ ತಾಲ್ಲೂಕು ಎಎಪಿ ಪಕ್ಷದ ಅಧ್ಯಕ್ಷ ಗಣೇಶ್ ಸೋಗೋಡು 27-01-2023 ರ ಶುಕ್ರವಾರ ಸಂಜೆ ಪಟ್ಟಣದ ಬಿಸಿಎಂ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ  ಬಿಜೆಪಿ ಮಹಿಳಾ ಮುಖಂಡರು ಪಕ್ಷದ ಸಭೆ ನಡೆಸಿ ಕೆಲವು ವಿದ್ಯಾರ್ಥಿನಿಯರಿಗೆ ಬಿಜೆಪಿ ಪಕ್ಷದ ಸದಸ್ಯತ್ವ ನೋಂದಣಿ ಮಾಡಿದ್ದಾರೆ. ಈ ವಿಷಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಈ ಸಂಧರ್ಭದಲ್ಲಿ ಪಟ್ಟಣದ ಪ್ರಥಮ ಪ್ರಜೆಯಾದ ಗ್ರಾಪಂ ಅಧ್ಯಕ್ಷರು ,ಉಪಾಧ್ಯಕ್ಷರು ಮತ್ತು ಕೆಲ ಸದಸ್ಯರು ಉಪಸ್ಥಿತರಿದ್ದು ಆಡಳಿತವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ.


ಸರ್ಕಾರಿ ಹಾಸ್ಟೆಲ್ ನಲ್ಲಿ ಸದಸ್ಯತ್ವ ಅಭಿಯಾನ ನಡೆಸಿರುವುದು ಅಕ್ಷಮ್ಯ ಅಪರಾಧ ಸರ್ಕಾರಿ ಕಛೇರಿ ಮತ್ತು ಶೈಕ್ಷಣಿಕ ಕೇಂದ್ರಗಳಲ್ಲಿ ಪಕ್ಷ ರಾಜಕಾರಣ ಮಾಡುವುದು ನಿಷೇಧವಿದ್ದರೂ ನಿಯಮವನ್ನು ಉಲ್ಲಂಘಿಸಿರುವ ಜನಪ್ರತಿನಿಧಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಖಂಡನೀಯವೆಂದು ಆರೋಪಿಸಿ ತಕ್ಷಣ ಮೇಲ್ಕಂಡ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ,ಸದಸ್ಯರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮತ್ತು ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದೇವೆ ಎಂದರು.




ಈ ಸಂದರ್ಭದಲ್ಲಿ ಎಎಪಿ ಪಕ್ಷದ ಮುಖಂಡ ಟಿ.ಆರ್.ಕೃಷ್ಣಪ್ಪ, ಮುಖಂಡರಾದ ಸಂತೋಷ ಆಶ್ರೀತಾ , ಹಸನಬ್ಬ, ಚೇತನಕುಮಾರ್, ಈಶ್ವರಪ್ಪ,ನದೀಮ್ ಮತ್ತು  ಇನ್ನಿತರರು ಹಾಜರಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

4 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

23 hours ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

1 day ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

2 days ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

2 days ago