ಕೋಳಿ ಅಂಗಡಿ ಮಾಲೀಕರೊಬ್ಬರಿಂದ ಇತ್ತೀಚೆಗೆ ಲಂಚ ಪಡೆಯುವಾಗ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕಾರ್ಗಲ್-ಜೋಗ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ. ಹರೀಶ್ ಗೌಡ ಸದಸ್ಯತ್ವವನ್ನು ವಜಾಗೊಳಿಸಲಾಗಿದೆ.
ಜೋಗದ 8ನೇ ವಾರ್ಡ್ ಸದಸ್ಯ ಹರೀಶ್ ಗೌಡ ಬಜಾರ್ ಲೈನ್‍ನ ಕೋಳಿ ಅಂಗಡಿ ಮಾಲೀಕ ಅಹ್ಮದ್ ಅಬ್ದುಲ್ ಬಾಕಿ ಎಂಬುವವರಿಗೆ ಪರವಾನಿಗೆ ಮಾಡಿಸಿಕೊಡುವುದಾಗಿ 50 ಸಾವಿರ ರೂ.ಲಂಚ ಕೇಳಿದ್ದರು. ಮನೆಯಲ್ಲಿ ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತರು ದಾಳಿ ನಡೆಸಿದ್ದರು.
ಈ ಸಂದರ್ಭದಲ್ಲಿ ಗಾಬರಿಗೊಳಗಾದ ಹರೀಶ್ ಗೌಡ ಹಣವನ್ನು ಗ್ಯಾಸ್ ಸ್ಟೌ ಮೇಲೆ ಇರಿಸಿ ಸುಟ್ಟು ಹಾಕುವ ಪ್ರಯತ್ನ ಮಾಡಿದ್ದರು. ಆಗ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಇದನ್ನು ತಡೆದು, ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಕರ್ನಾಟಕ ಪುರಸಭಾ ಕಾಯ್ದೆಯನ್ವಯ ತಕ್ಷಣ ಜಾರಿಗೆ ಬರುವಂತೆ ಹರೀಶ್ ಗೌಡ ಅವರನ್ನು ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…