Headlines

ವಿದ್ಯುತ್ ಕಂಬದಿಂದ ಬಿದ್ದು ಲೈನ್ ಮೆನ್ ಸಾವು !!! – ಸಕಾಲಕ್ಕೆ ಸಿಗದ ಆಂಬುಲೆನ್ಸ್ – ವ್ಯಾಪಕ ಆಕ್ರೋಶ..!!!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರಿನಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಲೈನ್ ಮೆನ್ ಕಂಬದಿಂದ ಬಿದ್ದು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟ ಘಟನೆ ಗುರುವಾರ ನಡೆದಿದೆ. 




ಘಟನೆಯಲ್ಲಿ ಮೃತಪಟ್ಟವರನ್ನು ರವಿ ನಾಯಕ(37) ಎಂದು  ಗುರುತಿಸಲಾಗಿದೆ.

ಹೆದ್ದೂರು ಬಳಿ ಕೆಲಸ ಮಾಡುತ್ತಿರುವಾಗ ಕಂಬದಿಂದ ಬಿದ್ದಿದ್ದು ಗಂಭೀರ ಗಾಯಗೊಂಡ ಇವರನ್ನು ಸ್ಥಳೀಯರು ಕಾರಿನಲ್ಲಿ ಕಟ್ಟೆಹಕ್ಕಲು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. 




ಅಲ್ಲಿಂದ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲು ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಸಿಗದ ಕಾರಣ ಕಾರಿನಲ್ಲಿ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಆಂಬುಲೆನ್ಸ್ ಇಲ್ಲದ ಕಾರಣ ರವಿ ಅವರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಇದೀಗ  ಅಲ್ಲಿನ ಆಸ್ಪತ್ರೆ ಮುಂದೆ ಹಲವು ಜನರು ಧರಣಿ ಕುಳಿತಿದ್ದಾರೆ.



Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.