ವಿದ್ಯುತ್ ಟ್ರಾನ್ಸ್ ಫಾರ್ಮ್ ದುರಸ್ತಿ ವೇಳೆ ವಿದ್ಯುತ್ ತಗುಲಿ ಪವರ್ ಮ್ಯಾನ್ ಸಾವು – ಜಿಲ್ಲೆಯಲ್ಲಿ ವಾರದಲ್ಲಿ ಎರಡು ದುರಂತ ಘಟನೆ|mescom

ಶಿಕಾರಿಪುರ : ಇಲ್ಲಿನ ಕಪ್ಪನಹಳ್ಳಿ ಗ್ರಾಮದಲ್ಲಿ ಟ್ರಾನ್ಸಪಾರ್ಮ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್​  ಸಾವನ್ನಪ್ಪಿರುವ ಘಟನೆ ನಡೆದಿದೆ.




ದುರ್ಘಟನೆಯಲ್ಲಿ ಶ್ರೀಶೈಲಾ ಎನ್ನುವವರು ಮೃತಪಟ್ಟಿದ್ದಾರೆ.

ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಟ್ರಾನ್ಸಫಾರಮ್​ನಲ್ಲಿ ದೋಷ ಕಾಣಿಸಿಕೊಂಡಿತ್ತು ಆ ಹಿನ್ನಲೆಯಲ್ಲಿ ಲೈನ್​ ಮ್ಯಾನ್​ ಶ್ರೀಶೈಲ ಸ್ಥಳಕ್ಕೆ ತೆರಳಿ ಸಂಬಂಧಿಸಿದ ಸ್ಟೇಷನ್ ನಿಂದ ಲೈನ್ ಕ್ಲಿಯರೆನ್ಸ್ ಪಡೆದು ದುರಸ್ತಿ ಕಾರ್ಯ ಕೈಗೊಂಡಿದ್ದರು.

ಆದರೆ ಏಕಾಏಕಿ ಆಫ಼್ ಆಗಿದ್ದ ವಿದ್ಯುತ್ ಲೈನ್ ನಲ್ಲಿ ವಿದ್ಯುತ್ ಪ್ರವಹಿಸಿದ್ದರಿಂದ ಶ್ರೀಶೈಲಾ ಮೃತಪಟ್ಟಿದ್ದಾರೆ.




ಲೈನ್​ ಮ್ಯಾನ್​ ಶ್ರೀಶೈಲಾ ಟ್ರಾನ್ಸಫಾರಮ್​ನ ಫೀಡರ್​ ಲೈನ್​ ಸಪ್ಲೆಗಳನ್ನು ಕಡಿತಗೊಳಿಸಿದ್ಧಾನೆ. ಆದರೂ ಈ ದುರ್ಘಟನೆ ಸಂಭವಿಸಿದೆ. ಎಲ್​ಸಿ ತೆಗೆದುಕೊಂಡಿದ್ಧಾಗಲೂ ವಿದ್ಯುತ್ ಪ್ರವಹಿಸಿದ್ದು ಹೇಗೆ ಎಂಬುದು ತನಿಖೆಯಿಂದ ತಿಳಿದುಬರಬೇಕಾಗಿದೆ.

ವಿದ್ಯುತ್ ಸಿಬ್ಬಂದಿಗಳು ಹೇಳುವ ಪ್ರಕಾರ, ಬೇರೊಂದು ಲೈನ್​ ತಾಗಿ ವಿದ್ಯುತ್ ಪ್ರವಹಿಸಿರಬಹುದು ಎನ್ನಲಾಗುತ್ತಿದೆ.

ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಯುವಕ ಸ್ಥಳದಲ್ಲೇ ಸಾವು

ಬಸ್‌-ಬೈಕ್ ಭೀಕರ ಅಪಘಾತ; 27 ವರ್ಷದ ಮೆಕ್ಯಾನಿಕ್ ಸ್ಥಳದಲ್ಲೇ ಸಾವು A 27-year-old mechanic was killed in a…

56 minutes ago

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು – ತೋಟದ ಮಾಲೀಕನ ಬಂಧನ

ಅಕ್ರಮ ವಿದ್ಯುತ್‌ ಬೇಲಿಗೆ ಸಿಲುಕಿ ಮೂರು ವರ್ಷದ ಕರಡಿ ಸಾವು - ತೋಟದ ಮಾಲೀಕನ ಬಂಧನ A three-year-old male…

1 hour ago

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

5 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

6 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

20 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

20 hours ago