ಶಿವಮೊಗ್ಗ : ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿಯೊಬ್ಬ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಸೋಮಿನಕೊಪ್ಪದ ಪಶು ವೈದ್ಯಕೀಯ ಮಹಾವಿದ್ಯಾಲಯದ ಬಳಿ ಘಟನೆ ಸಂಭವಿಸಿದೆ.
ರೈಲ್ವೆ ಹಳಿ ಮೇಲೆ ಯುವಕನೊಬ್ಬನ ಮೃತದೇಹ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದರು. ಮೃತನಿಗೆ ಅಂದಾಜು 17 ವರ್ಷ ಎಂದು ತಿಳಿದು ಬಂದಿದೆ. ಈತ ಶಿವಮೊಗ್ಗ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಎಂದು ಗೊತ್ತಾಗಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ರೈಲ್ವೆ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.