ಗ್ರಾಮ ಪಂಚಾಯಿತಿ ಸದಸ್ಯ ಆನಂದ ಹರಟೆ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು…!!!
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಚಿಪ್ಪಳ್ಳಿ ಬಳಿಯಲ್ಲಿ ಹೊಸೂರು ಗ್ರಾಮ ಪಂಚಾಯಿತಿ ಸದಸ್ಯ ಆನಂದ ಹರಟೆ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಗ್ರಾಪಂ ಸದಸ್ಯ ಆನಂದ್ ಹರಟೆ ಸಾಗರದಿಂದ ಐಗಿನಬೈಲಿನ ತಮ್ಮ ಮನೆಗೆ ತೆರಳುತ್ತಿದ್ದಾಗ ಖಾಸಗಿ ಬಸ್ ಚಿಪ್ಪಳಿ ಬಳಿ ತಮ್ಮ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಈ ಸಂಧರ್ಭದಲ್ಲಿ ಆನಂದ್ ಹರಟೆ ಕಾರಿನಿಂದ ಇಳಿಯುತ್ತಿದ್ದಂತೆ ಇಬ್ಬರು ಅಪರಿಚಿತ ವ್ಯಕ್ತಿಗಳು ಸಿನಿಮೀಯ ರೀತಿಯಲ್ಲಿ ಸ್ಕೂಟಿಯಲ್ಲಿ ಬಂದು ಏಕಾಏಕಿ ಟ್ಯೂಬ್ ಲೈಟ್ ಪಟ್ಟಿಗಳಿಂದ ಆನಂದ್ ಹರಟೆ ಕಾಲು ಹಾಗೂ ತಲೆಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಗಾಯಾಳು ಆನಂದ್ ಹೆರಟೆ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ತಲೆಗೆ ಹಾಗೂ ಕಾಲಿಗೆ ತೀವ್ರವಾದ ಗಾಯವಾಗಿದೆ.
ಖಾಸಗಿ ಬಸ್ ಉದ್ದೇಶಪೂರ್ವಕವಾಗಿ ತಮ್ಮ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಭಾಗ ನಜ್ಜುಗುಜ್ಜಾಗಿದೆ. ಕಿಡಿಗೇಡಿಗಳು ಏಕಾಏಕಿ ಹಲ್ಲೆ ನಡೆಸಿದ್ದಾರೆ ಇವರ ಮೇಲೆ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಂಡು ಅವರನ್ನು ಬಂಧಿಸಬೇಕೆಂದು ದೂರು ದಾಖಲಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್