ಹುಂಚಾ : ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ನಡೆದಿದೆ.
ತಿಮ್ಮಪ್ಪ ಜಿ ಡಿ (54) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಕಳೆದ ಹಲವಾರು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದ ಇವರು ಮಾನಸಿಕ ಖಿನ್ನತೆಗೊಳಗಾಗಿದ್ದರು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಶೌಚಗೃಹದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕೊಂಡೊಯ್ಯಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,ಪ್ರಕರಣ ದಾಖಲಾಗಿದೆ.