ಹೊಂಬುಜಾ ಶ್ರೀಗಳ ಸಮಾಜಮುಖಿ ಚಿಂತನೆಯಿಂದ ಶ್ರೀಕ್ಷೇತ್ರ ಅಭಿವೃದ್ಧಿಯ ಪಥದತ್ತ ಸಾಗಿದೆ – ಧರ್ಮಸ್ಥಳ ಸುರೇಂದ್ರ ಕುಮಾರ್|hombuja

ರಿಪ್ಪನ್‌ಪೇಟೆ : ಕೇವಲ12 ವರ್ಷದಲ್ಲಿ ಹೊಂಬುಜ ಜೈನಮಠ ಅಪಾರವಾಗಿ ಆಭಿವೃದ್ದಿಯಾಗಿರುವ ಹಿಂದೆ ಹೊಂಬುಜಾ ಶ್ರೀಗಳವರ ಸಮಾಜ ಮುಖಿ ಚಂತನೆ ಮತ್ತು ಧರ್ಮದ ಪರಿಪಾಲನೆ ಪ್ರಶಂಸನೀಯ ಎಂದು ಭಾರತೀಯ ಜೈನಮಿಲನ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಧರ್ಮಸ್ಥಳದ ಸುರೇಂದ್ರ ಕುಮಾರ್ ಹೇಳಿದರು.

ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಹೊಂಬುಜಾ ಕ್ಷೇತ್ರ ಅತ್ಯಂತ ಕಡಿಮೆ ಅವಧಿಯಲ್ಲಿ ಅಭಿವೃದ್ಧಿಯತ್ತ ಸಾಗಿರುವುದಕ್ಕೆ ಹೊಂಬುಜಾ ಶ್ರೀಗಳ ಸಮಾಜಮುಖಿ ಚಿಂತನೆಯೇ ಮೂಲ ಕಾರಣವಾಗಿದ್ದು ಅವರ ಶ್ರಮದಿಂದ ಹೊಬುಜಾ ಕ್ಷೇತ್ರ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಾ ಬಂದಿದ್ದು ಹಾಗೇಯೆ ನೂತನ ಯಾತ್ರಿ ನಿವಾಸ , ಬೋಜನಾ ಗೃಹ ,ಸಾಗರದಲ್ಲಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಹೀಗೆ ಹತ್ತು ಹಲವಾರು ಕಾರ್ಯಗಳನ್ನು ನಡೆಸುತ್ತಾ ಬಂದಿದ್ದು ಮುಂದಿನ ದಿನಗಳಲ್ಲಿ ಶ್ರೀಗಳ ನೇತ್ರತ್ವದಲ್ಲಿ ಶ್ರೀ ಕ್ಷೇತ್ರ ಉನ್ನತ ಮಟ್ಟಕ್ಕೆ ಏರುತ್ತದೆ ಎಂದು ಹೇಳಿ ಶ್ರೀಕ್ಷೇತ್ರದ ಅಮ್ಮನವರ ಕೃಪಾ ಕಟಾಕ್ಷವೇ ಇಲ್ಲಿನ ಈ ಪ್ರಗತಿಗೆ ಶ್ರೀರಕ್ಷೆ ಎಂದರು.
ರಾಷ್ಟ ಸಂತ ೧೦೮ ಗುಣಧರನಂದಿ ಮುನಿಮಹಾರಾಜರು ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿ ಜೈನ ಧರ್ಮದ ಮೂಲ ಮಂತ್ರ ಅಹಿಂಸಾ ತತ್ವ, ಅದೇ ಸಿದ್ದಾಂತದಿಂದ  ಭಾರತ ದೇಶ ಸ್ವಾತಂತ್ರ್ಯ ಪಡೆದು ಪ್ರಸ್ತುತ ಅದ್ಬುತ ದೇಶವಾಗಿದೆ.ಮೊಘಲರ ಕಾಲದಲ್ಲಿ ಜೈನ ಧರ್ಮ ಅವನತಿಯತ್ತ ಸಾಗುವಂತಾಗಿತು. ನಂತರದಲ್ಲಿ ಭಟ್ಟಾರಕರು ಜೈನ ಧರ್ಮವನ್ನು ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಜಗತ್ತಿನಾದ್ಯಂತ ಜೈನ ಧರ್ಮೀಯರ ಅವಶೇಷಗಳ ಇಂದಿಗೂ ಪತ್ತೆಯಾಗುತ್ತಿರುವುದು ಜೈನ ಧರ್ಮದ ಪರಂಪರೆಯನ್ನು ತಿಳಿಸುತ್ತದೆ.

ಜಗತ್ತಿನಾಂದ್ಯತ ಜೈನ ಧರ್ಮದ ಇತಿಹಾಸವಿದೆ  ವೇದಗಳ ಕಾಲದಲ್ಲಿಯೂ ಜೈನ ಧರ್ಮಕ್ಕೆ ಹೆಚ್ಚು ಪ್ರಾತಿನಿಧ್ಯ ಇತ್ತು ಎಂದು ಉಲ್ಲೇಖಿಸಿದ ಶ್ರೀಗಳು ಧರ್ಮಸ್ಥಳದ ಧರ್ಮಾಧಿಕಾರಿಗಳ ಆಹಾರ ದಾನ ಆಭಯದಾನ.ಶಾಸ್ತ್ರದಾನ ಹಾಗೂ ಔಷಧಿದಾನ ಇಂತಹ ನಾಲ್ಕು ದಾನಗಳ ಮೂಲಕ ಜಗತ್ತಿನಲ್ಲೆಡೆ ಜೈನ ಪರಂಪರೆಯನ್ನು ಬೆಳಗಿಸಿದ ಕೀರ್ತಿ ಜೈನ ಧರ್ಮದಾಗಿದ್ದು ಈ ನಿಟ್ಟಿನಲ್ಲಿ ಕಲಿಯುಗದ ಚಕ್ರವರ್ತಿ ಎಂದು ವೀರೇಂದ್ರ ಹೆಗ್ಗಡೆಯವರ ಕಾರ್ಯವನ್ನು ವರ್ಣಿಸಿದರು. ಪ್ರಸ್ತುತ ಕಾಲದಲ್ಲಿ ಜೈನ ಧರ್ಮದ ಸಿದ್ದಾಂತ ಕಠಿಣವಾಗಿದ್ದರೂ ಅದನ್ನು ಪರಿಪಾಲಿಸುವುದು ಇಂದಿನ ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಾತ್ಸಲ್ಯ ಮೂರ್ತಿ ಮುನಿಶ್ರೀ 108 ಪುಣ್ಯಸಾಗರ ಮಹರಾಜರು, ಕೊಲ್ಲಾಪುರದ ಶ್ರೀ ಕ್ಷೇತ್ರ ಸ್ವಸ್ತಿಶ್ರೀ ಲಕ್ಷ್ಮಿಸೇನ ಭಟ್ಟಾರಕ ಸ್ವಾಮಿಜಿ ಮತ್ತು ಡಾ.ದೇವೆಂದ್ರ ಕೀರ್ತಿ ಭಟ್ಟಾರಕ ಸ್ವಾಮಿಜಿ ದಿವ್ಯ ಸಾನಿಧ್ಯ ವಹಿಸಿದ್ದರು.

ಈ ಸಂಧರ್ಭದಲ್ಲಿ ಭಾರತೀಯ ಜೈನ್ ಮಿಲನ್ ಉಪಾಧ್ಯಕ್ಷರಾದ ಅನಿತಾ ಸುರೇಂದ್ರ ಕುಮಾರ್, ಯುವರಾಜ್ ಭಂಡಾರಿ ,ಕೆ ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

4 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

4 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

10 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago