ಹೊಸನಗರ ಜಾತ್ರೆಯ ಮೆರುಗು ಹೆಚ್ಚಿಸಿದ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೈಭವ|fare

ಹೊಸನಗರ :ಮೈ ಮನ ತಣಿಸುವ ನೃತ್ಯ ವೈಭವ ಕಾರ್ಯಕ್ರಮ, ಮನಕ್ಕೆ ಮುದ ನೀಡುವ ಪುಟ್ಟ ಪುಟಾಣಿಗಳ, ಚಿಣ್ಣರ ಹಾಡು ,ನೃತ್ಯಗಳು. ಹೌದು ಈ ಸುಂದರ ಕಾರ್ಯಕ್ರಮವು ಹೊಸನಗರದ ಶ್ರೀ ಮಾರಿಕಾಂಬಾ ಜಾತ್ರೆಯಲ್ಲಿ ಅದ್ದೂರಿಯಿಂದ ಸಾವಿರಾರು ಜನಗಳ ಸಮ್ಮುಖದಲ್ಲಿ ನಡೆದಿದ್ದು,ಹೊಸನಗರ ಜಾತ್ರೆಯ ಮೆರಗನ್ನು ಇನ್ನಷ್ಟು ಹೆಚ್ಚಿಸಿದೆ!! ಏಕೆಂದರೆ ಕಳೆದ ಬಾರಿ ಅದೇ ವೇದಿಕೆಯಲ್ಲಿ ನಡೆದಂತಹ ಕಾರ್ಯಕ್ರಮಗಳು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ವಿರೋಧ ಸಹ ಕೇಳಿ ಬಂದಿತ್ತು,ಅದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿ ವಿರೋಧದ ಅಲೆಯೇ ಎದ್ದಿತ್ತು..

ಆದರೆ ಪ್ರಸಕ್ತ ವರ್ಷದ ಜಾತ್ರಾ ಸಮಿತಿ ಅತ್ಯಂತ ಅಚ್ಚುಕಟ್ಟಾಗಿ ಹೊಸನಗರದ ಮಕ್ಕಳಿಗೊಂದು ಬೃಹತ್ ವೇದಿಕೆಯನ್ನೇ ಸೃಷ್ಟಿಸಿದ್ದಾರೆ,ಆ ವೇದಿಕೆಯಲ್ಲಿ ವರ್ಣ ರಂಜಿತ ಬೆಳಕುಗಳು, ಮುದ ನೀಡುವ ಹಾಡುಗಳು, ಮಕ್ಕಳ ನೃತ್ಯ ,ಅಭಿನಯ, ಪಿರಮಿಡ್ ಹೀಗೆ ಹಲವಾರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉತ್ತಮ ವೇದಿಕೆ ಆಗಿತ್ತು ಹಾಗೂ ಪೋಷಕರು ತಮ್ಮ ಮಕ್ಕಳ ಪ್ರತಿಭೆಯ ಅನಾವರಣ ನೋಡಿ ಹೊಸನಗರದವರೊಂದಿಗೆ ಹರ್ಷದಲಿ ಮಿಂದೆದ್ದರು.!!

ಹೊಸನಗರದ  ತಾಲೂಕಿನ ಸುತ್ತಮುತ್ತಲಿನ ಅನೇಕ ಶಾಲೆಗಳಾದ ರಾಮಕೃಷ್ಣ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾವಿನಕೊಪ್ಪ, ಗುರೂಜಿ, ಕುವೆಂಪು ಶಾಲಾ ಮಕ್ಕಳು ಹೀಗೆ ಹಲವು ಪುಟಾಣಿಗಳು, ಸಂಗೀತ ಶಾಲೆಯ ವಿದ್ಯಾರ್ಥಿಗಳು ಇಂದು ಹೊಸನಗರ ಜಾತ್ರೆಗೆ ಸೇರಿದವರನ್ನೆಲ್ಲಾ ರಂಜಿಸಿದ್ದು ಗಮನಾರ್ಹ ಸಂಗತಿ!!

ಮಕ್ಕಳ ಮಲ್ಲಗಂಬ ಕಸರತ್ತು!

ವಿಶೇಷ ವಾಗಿ ಗುರೂಜಿ ಇಂಟರ್ನ್ಯಾಷನಲ್ ಶಾಲಾ ಮಕ್ಕಳ ಮಲ್ಲಗಂಬದಲ್ಲಿ ಮಾಡಿದ ಕಸರತ್ತುಗಳು ನೋಡುಗರ ಹುಬ್ಬೆರುವಂತೆ ಮಾಡಿತು..!!

ಹೊಸನಗರದಲ್ಲಿ ಆರ್ಕೆಸ್ಟ್ರಾ ಬಿಟ್ಟರೆ  ಜನರು ಸೇರುವುದೇ ಇಲ್ಲ ವಾಡಿಕೆ,ಜನರನ್ನು ಸೇರಿಸುವುದೇ ಕಷ್ಟ ಹೀಗೆಲ್ಲಾ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದರು ಆದರೆ ಇಂದು ಅವನ್ನೆಲ್ಲ ಮೀರಿ ಪುಟಾಣಿಗಳ ಕಾರ್ಯಕ್ರಮಕ್ಕೆ ಜನಸಾಗರದ ದೌಡೆ ಹರಿದು ಬಂದಿದ್ದು ವಿಶೇಷವಾಗಿತ್ತು.
ಹೊಸನಗರ ಶ್ರೀ ಮಾರಿಕಾಂಬ ಜಾತ್ರೆಯ ಸಮಿತಿಯ ಶ್ರೀ ಹಾಡಿಮನೆ ಗೋಪಾಲ್, ಮನೋಹರ್, ಸುನಿಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು..
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

9 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

9 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

15 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago