ಹೊಸನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರನ್ನಾಗಿ ರಿಪ್ಪನ್‌ಪೇಟೆಯ ಆಸೀಫ಼್ ಭಾಷಾ ರವರನ್ನು ನೇಮಕ ಮಾಡಲಾಗಿದೆ.
ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಸದಸ್ಯರೂ ಹಾಗೂ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿರುವ ಆಸೀಫ಼್ ಭಾಷಾ ರವರನ್ನು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಬ್ಬಾರ್ ನಿರ್ದೇಶನದಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸುಂದರೇಶ್ ಆದೇಶದಂತೆ ನೇಮಕ ಮಾಡಲಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಉಪಾಧ್ಯಕ್ಷರಾದ ಸಿರಾಜ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸೈಯದ್ ಅಪ್ರೋಜ್ ಮತ್ತು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಜ಼ಮಿಲ್ ಪಾಷ ರವರು ನೇಮಕಾತಿ ಪತ್ರವನ್ನು ವಿತರಿಸಿದರು.
ನೂತನವಾಗಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಆಸೀಫ಼್ ಭಾಷಾ ರವರಿಗೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಮತ್ತು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ,ಡಾ ರಾಜನಂದಿನಿ, ಮಾಜಿ ಜಿಪಂ ಸದಸ್ಯರಾದ ಕಲಗೋಡು ರತ್ನಾಕರ್ ,ಬಿ ಪಿ ರಾಮಚಂದ್ರ ಮುಖಂಡರಾದ ಬಿ ಜಿ ನಾಗರಾಜ್ ,ಅಮೀರ್ ಹಂಜಾ,ಎಂ ಎಂ ಪರಮೇಶ್, ಉಬೇದುಲ್ಲಾ ಷರೀಫ್ ,ಗಣಪತಿ ,ಪ್ರಕಾಶ್ ಪಾಲೇಕರ್ ಸೇರಿದಂತೆ ಅನೆಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.