ಹೊಸನಗರ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ – ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ|faire

ಹೊಸನಗರ : ಇಲ್ಲಿನ ದ್ಯಾವರ್ಸದಲ್ಲಿರುವ ದುರ್ಗಾಂಬಾ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಅದ್ದೂರಿ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದ್ದು ಬೆಳಿಗ್ಗೆ 9 ಗಂಟೆಯಿಂದ ಪೂಜಾ ಕಾರ್ಯ ಆರಂಭವಾಗಿದೆ.




ಬೆಳಿಗ್ಗೆ 8ಗಂಟೆಗೆ ಹೊಸನಗರದ ಗಣಪತಿ ದೇವಸ್ಥಾನದ ಮುಂಭಾಗ ಮಾರಿಯಮ್ಮನವರ ಮೂರ್ತಿಗೆ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ ನಂತರ ಮಾರಿಯಮ್ಮನವರಿಗೆ ಕೃಷ್ಣಮೂರ್ತಿ ಭಟ್ ಮತ್ತು ಸಹೋದರರಿಂದ ಪೂಜೆ ಸಲ್ಲಿಸಿ ಶಿವಪ್ಪನಾಯಕ ರಸ್ತೆಯ ಮಾರ್ಗವಾಗಿ ಶ್ರೀ ದುರ್ಗಾಂಬಾ ದೇವಸ್ಥಾನಕ್ಕೆ ಮೆರವಣಿಗೆಯ ಮೂಲಕ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ಸಲ್ಲಿಸಿ ನಂತರ ಸಾರ್ವಜನಿಕ ಪೂಜೆಗೆ ದುರ್ಗಾಂಬಾ ದೇವಸ್ಥಾನದ ಮುಂಭಾಗದಲ್ಲಿ ಪ್ರತಿಷ್ಟಾಪಿಸಲಾಯಿತು.


ಜನವರಿ 25 ಬುಧವಾರದಿಂದ ಮಾರಿಯಮ್ಮನವರ ಗಂಡನ ಮನೆಯೆಂದೇ ಕರೆಸಿಕೊಳ್ಳುವ ಮಾರಿಗುಡ್ಡದಲ್ಲಿರುವ ಮಾರಿಯಮ್ಮ ದೇವಸ್ಥಾನದ ಆವರಣದಲ್ಲಿ 8 ದಿನಗಳ ಕಾಲ ಅದ್ದೂರಿಯಾಗಿ ಜಾತ್ರೆ ನಡೆಸಲಾಗುವುದು.




ಬುಧವಾರ ಬೆಳಿಗ್ಗೆ 9ಗಂಟೆಯಿಂದ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಸಾರ್ವಜನಿಕರು ಹಾಗೂ ಭಕ್ತಾಧಿಗಳು ಅಮ್ಮನವರಿಗೆ ಮಂಗಳಾರತಿ ಪೂಜೆ ಸಲ್ಲಿಸುವುದರ ಜೊತೆಗೆ ಪ್ರತಿದಿನ ಸಂಜೆ 8ಗಂಟೆಯಿಂದ ಸಾರ್ವಜನಿಕರ ಮನೋರಂಜನೆಗಾಗಿ ನಾಟಕ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು ಶಾಲಾ ಮಕ್ಕಳಿಂದ ವಿವಿಧ ಬಗೆಯ ಪೀರಮಿಡ್ ರಚನೆ ಹಾಡು ಡ್ಯಾನ್ಸ್ ಗಳು ನೃತ್ಯಗಳು ಪರ ಸ್ಥಳದಿಂದ ಆಗಮಿಸಿದ ಕಲಾವಿದರಿಂದ ಆರ್ಕೆಸ್ಟ್ರಾಗಳು ನಡೆಯುವುದರ ಜೊತೆಗೆ ವಿವಿಧ ಬಗೆಯ ಮನರಂಜನೆಯ ಆಟಗಳಾದ ಬ್ರೇಕ್ ಡ್ಯಾನ್ಸ್, ನಾಯಿಯಿಂದ ಸಾಹಸಗಳು ತೊಟ್ಟಿಲುಗಳು ಇತರೆ ಆಟದ ಸಾಮಾಗ್ರಿಗಳು ಆಗಮಿಸಿದೆ ಒಟ್ಟರೇ 8ದಿನಗಳ ಕಾಲ ಹೊಸನಗರ ಮಾರಿಜಾತ್ರೆ ಅದ್ದೂರಿಯಾಗಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಹಾಗೂ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಸಂಭಾವನೀಯ ಅಭ್ಯರ್ಥಿ  ಬೇಳೂರು ಗೋಪಾಲಕೃಷ್ಣ ಉಪಸ್ಥಿತರಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ Police rescue a minor…

5 hours ago

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…

12 hours ago

ತಂದೆ–ಮಗನ ಜಗಳ ಕೊಲೆಯಲ್ಲಿ ಅಂತ್ಯ; ಮೃತದೇಹ ಬಾವಿಗೆ ಎಸೆದ ಆರೋಪ

ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ A man…

14 hours ago

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ!

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…

1 day ago

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…

1 day ago

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ

ಉಳ್ಳೂರು ಕೆರೆ ಬಳಿ ಮರಕ್ಕೆ ಢಿಕ್ಕಿ ಹೊಡೆದ ಕಂಟೇನರ್ ಲಾರಿ A container lorry lost control and collided…

1 day ago