ಕಾರು ಅಪಘಾತ – ಸಹಾಯ ಮಾಡುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದ ಗೃಹ ಸಚಿವ ಆರಗ|accident
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಸಮೀಪ ಅಪರಿಚಿತ ಕಾರೊಂದು ಅಪಘಾತಕ್ಕೀಡಾಗಿತ್ತು. ಕಾರಿನಲ್ಲಿದ್ದ ಶಿವಮೊಗ್ಗದ ನಿವಾಸಿಗಳು ಕಾರ್ಕಳಕ್ಕೆ ಹೋಗುತ್ತಿದ್ದರು. ಮಕ್ಕಳ ಪರೀಕ್ಷೆ ಬರೆಸುವ ಕಾರಣಕ್ಕೆ ಶಿವಮೊಗ್ಗದ ಕುಟುಂಬ ಹೋಗುತ್ತಿತ್ತು. ಈ ವೇಳೆ ಅಚಾನಕ್ಕಾಗಿ ರಸ್ತೆ ಪಕ್ಕದ ಚರಂಡಿಗೆ ಅವರ ಕಾರು ಇಳಿದು, ಅದನ್ನು ಮೇಲೆ ತರಲಾಗದೇ ಒದ್ದಾಡುತ್ತಿದ್ದರು. ಈ ಸಂದರ್ಭದಲ್ಲಿ, ಇದೇ ಮಾರ್ಗವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ದಾರಿಯಲ್ಲಿ ಕಾರು ಅಪಘಾತವಾಗಿದ್ದ ದೃಶ್ಯ ಕಂಡ ತಕ್ಷಣ ತಮ್ಮ ಕಾರು ನಿಲ್ಲಿಸಲು ಡ್ರೈವರ್…