ಸಾಗರದ ಮನೆಯೊಂದರಲ್ಲಿ ಬೆಂಕಿ ಅವಘಡ – ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|fire
ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಎಸ್.ಎನ್. ವೃತ್ತದಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಉಂಟಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಅನಾಹುತ ಸಂಭವಿಸಿದೆ. ಸಾಗರದ ಮಾರ್ಕೆಟ್ ರಸ್ತೆಯ ಶಿವಪ್ಪ ನಾಯಕ ವೃತ್ತದ ಇರುವ ಮನೆಯಲ್ಲಿ ಈ ಬೆಂಕಿ ಅನಾಹುತವಾಗಿದೆ. ಮನೆಯಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ತಕ್ಷಣ ಬಂದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಮೊದಲ ಮಹಡಿಯಲ್ಲಿ ಇದ್ದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಯುವಕರು ಜೀವದ ಹಂಗು…