Headlines

ಅಕ್ರಮ ಮರ ಕಡಿತಲೆ – ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ನಾಟ ಹಾಗೂ ವಿದ್ಯುತ್ ಚಾಲಿತ ಮರ ಕೊಯ್ಯುವ ಯಂತ್ರ ವಶಕ್ಕೆ|Teak

ಅಕ್ರಮವಾಗಿ ಸಾಗುವನಿ ಮರ ಕಡಿತಲೆ ಮಾಡುತಿದ್ದ ವೇಳೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ನಾಟ ಹಾಗೂ ವಿದ್ಯುತ್ ಚಾಲಿತ ಯಂತ್ರವನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಸಾಗರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿ ಕಲ್ಮನೆ  ಗ್ರಾಮದಲ್ಲಿ ದಾಳಿ ನಡೆಸಿದ ಪೊಲೀಸ್ ಅರಣ್ಯ ಸಂಚಾರಿ ದಳ ಅಕ್ರಮವಾಗಿ ಸಾಗುವಾನಿ ಮರವನ್ನು ಕಡಿದು ವಿದ್ಯುತ್ ಚಾಲಿತ ಯಂತ್ರದಿಂದ ಕೊಯ್ಯುತ್ತಿರುವಾಗ ದಾಳಿ ನಡೆಸಿ ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ಲಕ್ಷಾಂತರ…

Read More

ಆನಂದಪುರ – ಶಿಕಾರಿಪುರ – ರಾಣೆಬೆನ್ನೂರು ನೂತನ ರೈಲು ಮಾರ್ಗ – ಫೆ.27 ಕ್ಕೆ ಪಿಎಂ ಮೋದಿಯಿಂದ ಕಾಮಗಾರಿಗೆ ಚಾಲನೆ : ಬಿ ವೈ ರಾಘವೇಂದ್ರ

ರಿಪ್ಪನ್‌ಪೇಟೆ : ಬ್ರಿಟೀಷ್ ಕಾಲದ ರೈಲ್ವೆ ಮಾರ್ಗ ಹೊರತು ಈತನಕ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳು ಇರಲಿಲ್ಲ.ಇದೆ ಮೊದಲ ಭಾರಿ ಹೊಸ ರೈಲ್ವೆ ಮಾರ್ಗ ಸಿದ್ಧವಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು. ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸ್ವಾತಂತ್ರ್ಯ ಬಂದ ನಂತರ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳನ್ನು ಮಾಡಿಲ್ಲ. 2500 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ಆನಂದಪುರ…

Read More

ಕಾರ್ಯನಿರ್ವಹಿಸುತಿದ್ದ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ|suicide

ಶಿವಮೊಗ್ಗ : ತಾನು ಕೆಲಸ ಮಾಡುತ್ತಿರುವ ಕಚೇರಿಯಲ್ಲೇ ಮಹಿಳೆಯೋರ್ವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆಗೆ ಆಕೆಯ ಕುಟುಂಬ ಮಹಾನಗರ ಪಾಲಿಕೆಯ ವಾಹನ ಚಾಲಕ ಕಾರಣವೆಂದು ಆರೋಪಿಸಿದೆ. ಗಾರ್ಡನ್ ಏರಿಯಾ 3ನೇ ಕ್ರಾಸ್ ನಲ್ಲಿರುವ ಚುಂಚಾದ್ರಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದ ಅನಿತಾ(32) ಇಂದು ಎಂದಿನಂತೆ ಕೆಲಸಕ್ಕೆ ಹೋಗಿದ್ದು ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದು ಮಧ್ಯಾಹ್ನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅನಿತಾಳಿಗೆ ರಾಮಮೂರ್ತಿಯೊಂದಿಗೆ 14 ವರ್ಷದ ಹಿಂದೆ ‌ಮದುವೆಯಾಗಿತ್ತು. ಮದುವೆಯಾಗಿ 13 ವರ್ಷದ ಮಗಳಿದ್ದಾಳೆ. ಎರಡು…

Read More

ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಸುಳ್ಳು ಕೇಸ್ – ಪೊಲೀಸ್ ಠಾಣೆ ಮುಂದೆಯೇ ಮಲಗಿದ ಕಿಮ್ಮನೆ : ಅಹೋರಾತ್ರಿ ಪ್ರತಿಭಟನೆ|kimmane

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕ್ಷೇತ್ರದಲ್ಲಿ ಪೊಲೀಸ್ v/s ಕಾಂಗ್ರೆಸ್ ಎಂಬ ಪರಿಸ್ಥಿತಿ ಬಂದಿದೆ. ಗೃಹಸಚಿವರ ಕ್ಷೇತ್ರದಲ್ಲಿ ಪೊಲೀಸರು ರಾಜಕಾರಣ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿ ಜಿಲ್ಲಾ ರಕ್ಷಣಾಧಿಕಾರಿಗಳು ಬರುವವರೆಗೂ ತೀರ್ಥಹಳ್ಳಿ ಪೊಲೀಸ್ ಠಾಣೆ ಮುಂಭಾಗ ಅಹೋರಾತ್ರಿ ಪ್ರತಿಭಟನೆ ನಡೆಸುತಿದ್ದಾರೆ. ಮಂಗಳವಾರ ನಡೆದ ಹರೀಶ್​ ಮೇಲಿನ ಹಲ್ಲೆ ಕೇಸ್​ನಲ್ಲಿ ಪೊಲೀಸರು ಘಟನಾ ಸ್ಥಳದಲ್ಲಿ ಇಲ್ಲದವರ ಮೇಲೂ ಕೇಸ್ ಹಾಕಿದ್ದಾರೆ ಎಂದು ಆರೋಪಿಸಿದ ಕಿಮ್ಮನೆ ರತ್ನಾಕರ್​ ನೇರವಾಗಿ ಬಂದು ಪೊಲೀಸ್ ಠಾಣೆ ಎದುರು ಧರಣಿ ಕೂತರು, ಅಲ್ಲಿಯೇ ಜಮಖಾನ ತರಿಸಿ…

Read More

ಜೈನ ಮುನಿವರ್ಯರ ತತ್ವ ಪಾಲನೆ ಇಂದಿನ ಯುವಸಮೂಹಕ್ಕೆ ಸ್ಪೂರ್ತಿದಾಯಕವಾಗಿರಲಿ – ಡಾ. ಡಿ ವೀರೇಂದ್ರ ಹೆಗ್ಗಡೆ|hombuja

ಅಹಿಂಸಾ ತತ್ವವನ್ನು ಬೋಧನೆ ಮಾಡಿ ಅಹಿಂಸಾ ತತ್ವದಲ್ಲೇ ಧರ್ಮವನ್ನು ಕಟ್ಟಿ ಇಡೀ ಪ್ರಪಂಚಕ್ಕೆ ಸಾತ್ವಿಕ ತತ್ವ ಉಪದೇಶಗಳನ್ನು ನೀಡಿದ ಕೀರ್ತಿ ಜೈನ ಧರ್ಮಕ್ಕಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜ ಜೈನ ಮಠದಲ್ಲಿ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವದ ನಾಲ್ಕನೇ ದಿನವಾದ ಬುಧವಾರ  ಜಿನ ದತ್ತರಾಯ ಸಭಾ ಮಂಟಪ ಅರ್ಹದ್ದಾಸ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಪೂಜ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. 12…

Read More

ಮಕ್ಕಳ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತಿದ್ದ ಇಬ್ಬರ ವಿರುದ್ದ ಪ್ರಕರಣ ದಾಖಲು|CEN

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರ ವಿರುದ್ಧ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಕ್ಕಳ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿರುವ ಕುರಿತು ಅಮೆರಿಕಾದ ಸೈಬರ್ ಟಿಪ್ ಲೈನ್ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ಶಿವಮೊಗ್ಗದ ಸಿಇಎನ್ ಶಿಕಾರಿಪುರ ಹಾಗೂ ಭದ್ರಾವತಿ ತಾಲೂಕಿನ ತಲಾ ಒಬ್ಬರ ಮೇಲೆ ಕೇಸು ದಾಖಲಿಸಲಾಗಿದೆ. ಮಕ್ಕಳ ಅಶ್ಲೀಲ ಫೋಟೊ ಹಾಗೂ ವಿಡಿಯೋಗಳನ್ನು ನೋಡುವುದು, ಸಾಮಾಜಿಕ ಜಾಲತಾಣಗಳಲ್ಲಿ ನೋಡುವುದು, ವಿಡಿಯೋ ಕಳುಹಿಸುವುದು ಮತ್ತು ಮಾಡುವುದು…

Read More

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ – ನಳಿನ್ ಕುಮಾರ್ ಕಟೀಲ್

ರಿಪ್ಪನ್‌ಪೇಟೆ : ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಕ್ಕೂ ಅಧಿಕ ಸ್ಥಾನವನ್ನು ಬಿಜೆಪಿ‌ ಪಕ್ಷ ಗೆಲ್ಲಲಿದೆ ಎಂದು ಮಂಗಳೂರು ಲೋಕಸಭಾ ಸದಸ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್ ಹೇಳಿದರು. ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ನಂತರ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿ ಬಿಜೆಪಿ ಪಕ್ಷದಲ್ಲಿ ಆಂತರಿಕ ಕಲಹ ಇದೆ ಎನ್ನುವುದು ವಿರೋಧ ಪಕ್ಷಗಳು ಕಟ್ಟಿರುವ ಕಪೋಕಲ್ಪಿತ ಕಥೆಯಾಗಿದ್ದು ನಮ್ಮಲ್ಲಿ ಯಾವುದೇ…

Read More

ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರವಾಗಿ ಮಹತ್ತರ ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳು|airport

ಶಿವಮೊಗ್ಗ : ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ  ಕಾಮಗಾರಿ ಅಂತಿಮ ಹಂತದಲ್ಲಿದೆ. ಕೆಲವೇ ದಿನದಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆ ಹಿನ್ನೆಲೆ ಮತ್ತು ಕಾಮಗಾರಿಗೆ ತೊಡಕಾಗದಂತೆ ತಡೆಯಲು ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣ ವೀಕ್ಷಣೆಗೆ ನೂರಾರು ಜನ ನಿತ್ಯ ಬರುತ್ತಿದ್ದಾರೆ. ರನ್ ವೇ ಮೇಲೆ…

Read More

ಹೊಸನಗರ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ – ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ|faire

ಹೊಸನಗರ : ಇಲ್ಲಿನ ದ್ಯಾವರ್ಸದಲ್ಲಿರುವ ದುರ್ಗಾಂಬಾ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಅದ್ದೂರಿ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದ್ದು ಬೆಳಿಗ್ಗೆ 9 ಗಂಟೆಯಿಂದ ಪೂಜಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 8ಗಂಟೆಗೆ ಹೊಸನಗರದ ಗಣಪತಿ ದೇವಸ್ಥಾನದ ಮುಂಭಾಗ ಮಾರಿಯಮ್ಮನವರ ಮೂರ್ತಿಗೆ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ ನಂತರ ಮಾರಿಯಮ್ಮನವರಿಗೆ ಕೃಷ್ಣಮೂರ್ತಿ ಭಟ್ ಮತ್ತು ಸಹೋದರರಿಂದ ಪೂಜೆ ಸಲ್ಲಿಸಿ ಶಿವಪ್ಪನಾಯಕ ರಸ್ತೆಯ ಮಾರ್ಗವಾಗಿ ಶ್ರೀ ದುರ್ಗಾಂಬಾ ದೇವಸ್ಥಾನಕ್ಕೆ ಮೆರವಣಿಗೆಯ ಮೂಲಕ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ಸಲ್ಲಿಸಿ ನಂತರ ಸಾರ್ವಜನಿಕ…

Read More

ಹೊಂಬುಜಾ ಶ್ರೀಗಳ ಸಮಾಜಮುಖಿ ಚಿಂತನೆಯಿಂದ ಶ್ರೀಕ್ಷೇತ್ರ ಅಭಿವೃದ್ಧಿಯ ಪಥದತ್ತ ಸಾಗಿದೆ – ಧರ್ಮಸ್ಥಳ ಸುರೇಂದ್ರ ಕುಮಾರ್|hombuja

ರಿಪ್ಪನ್‌ಪೇಟೆ : ಕೇವಲ12 ವರ್ಷದಲ್ಲಿ ಹೊಂಬುಜ ಜೈನಮಠ ಅಪಾರವಾಗಿ ಆಭಿವೃದ್ದಿಯಾಗಿರುವ ಹಿಂದೆ ಹೊಂಬುಜಾ ಶ್ರೀಗಳವರ ಸಮಾಜ ಮುಖಿ ಚಂತನೆ ಮತ್ತು ಧರ್ಮದ ಪರಿಪಾಲನೆ ಪ್ರಶಂಸನೀಯ ಎಂದು ಭಾರತೀಯ ಜೈನಮಿಲನ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಧರ್ಮಸ್ಥಳದ ಸುರೇಂದ್ರ ಕುಮಾರ್ ಹೇಳಿದರು. ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಹೊಂಬುಜಾ ಕ್ಷೇತ್ರ ಅತ್ಯಂತ ಕಡಿಮೆ ಅವಧಿಯಲ್ಲಿ ಅಭಿವೃದ್ಧಿಯತ್ತ ಸಾಗಿರುವುದಕ್ಕೆ ಹೊಂಬುಜಾ ಶ್ರೀಗಳ ಸಮಾಜಮುಖಿ…

Read More