ಜ.22 ರಿಂದ 27 ರವರೆಗೆ ಜೈನರ ಕಾಶಿ ಹೊಂಬುಜಾ ಮಠದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾರ್ಮಿಕ ಸಭೆ
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜಾ ಕ್ಷೇತ್ರದಲ್ಲಿ ಅತಿಶಯ ಮಹಾಕ್ಷೇತ್ರದಲ್ಲಿ ಜನವರಿ 22 ರಿಂದ 27 ರವರೆಗೆ ನೂತನ ಮಾನಸ್ತಂಭೋಪರಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮಗಳು ಹೊಂಬುಜ ಜೈನ ದಿಗಂಬರ ಮಠದ ಜಗದ್ಗುರು ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರ ದಿವ್ಯ ಸಾನಿಧ್ಯದಲ್ಲಿ ಜರುಗಲಿದೆ ಎಂದು ಮಠದ ಆಡಳಿತಾಧಿಕಾರಿ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜನವರಿ 22 ಭಾನುವಾರ : ಭಾನುವಾರ ಮಧ್ಯಾಹ್ನ 2 ಗಂಟೆಗೆ ಜಿನದತ್ತರಾಯ ಸಭಾ ಮಂಟಪದ…