ಶಾಲಾ ವಿದ್ಯಾರ್ಥಿಗಳ ಅಪಘಾತ ಹೆಚ್ಚಳ ಹಿನ್ನೆಲೆ – ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ತಿಳಿಹೇಳಿದ ಶಾಸಕ ಹಾಲಪ್ಪ : ವೀಡಿಯೋ ವೈರಲ್|viral
ಕಳೆದ ಕೆಲವು ದಿನಗಳಿಂದ ಸಾಗರ ತಾಲೂಕಿನಲ್ಲಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳ ಸಾವು-ನೋವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ಶಾಸಕ ಹಾಲಪ್ಪ ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಕೈ ಹಾಕಿದ್ದಾರೆ. ಶಾಲಾ ಕಾಲೇಜುಗಳ ಸಭೆ ಸಮಾರಂಭಗಳಲ್ಲಿ ಹಾಗೂ ಕ್ಷೇತ್ರದಾದ್ಯಂತ ಕಾರಿನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿಗಳು ರಸ್ತೆಯಲ್ಲಿ ಸಂಚರಿಸುವಾಗ ಸುರಕ್ಷತೆಯಿಂದ ಹೇಗೆ ಸಂಚಾರ ಮಾಡಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಸಾಗರ ಪಟ್ಟಣದಲ್ಲಿ ಹಾಗೂ ಆನಂದಪುರ ಸಮೀಪದಲ್ಲಿ ರಸ್ತೆ ಅಪಘಾತಗಳಲ್ಲಿ ವಿದ್ಯಾರ್ಥಿಗಳು ಮೃತಪಟ್ಟಿದ್ದರು….