ಶಿವಮೊಗ್ಗದಲ್ಲಿ ನಾಳೆ ಜ.24 ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ.
ಹೆಸರಾಂತ ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ.
ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಅಡ್ಡರಸ್ತೆ, ಸಾಗರ ರಸ್ತೆ, ಇಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಎಸ್ಎಸ್ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಪಾಸ್ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ (ರೆಸ್ಯೂಮ್) ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ತೆಗೆದುಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದು., ಪ್ರವೇಶ ಉಚಿತವಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ. ದೂರವಾಣಿ ಸಂಖ್ಯೆ: 08182-255293, 9380663606 / 9482023412 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.