ಶಿವಮೊಗ್ಗ ಜಿಲ್ಲೆಯ ಸಂಸದ ಬಿ ವೈ ರಾಘವೇಂದ್ರ ಅವರ ಫೋಟೊಗ್ರಾಫರ್ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರದ ಮೆರವಣಿಗೆ ಮಾಡಿ, ಬೈಕ್ ರಾಲಿ ನಡೆಸಲಾಯಿತು.
ಹೊಸನಗರದ ಪಟ್ಟಣಕ್ಕೆ ಪಾರ್ಥಿವ ಶರೀರ ತಲುಪುತ್ತಿದ್ದಂತೆ ಅವರ ಸ್ನೇಹಿತರು, ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿದರು.
ಹೊಸನಗರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ನೆಹರು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಪ್ರಸನ್ನ ಭಟ್ಟರವರ ಪಾರ್ಥಿವ ಶರೀರವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ,ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ, ಬಿಜೆಪಿ ಮುಖಂಡರಾದ ಗುರುಮೂರ್ತಿ, ಚನ್ನವೀರಪ್ಪ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ನಿರ್ದೇಶಕ ಎನ್ಆರ್ ದೇವಾನಂದ್, ಪ್ರಸನ್ನ ಭಟ್ ಅವರ ಸ್ನೇಹಿತರು, ಬಿಜೆಪಿ, ಸಂಘ ಪರಿವಾರದ ಕಾರ್ಯಕರ್ತರು, ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಅಂತಿಮ ದರ್ಶನ ಪಡೆದರು.
ಪಾರ್ಥಿವ ಶರೀರದ ಮೆರವಣಿಗೆ ಹಾಗೂ ಅಂತಿಮ ದರ್ಶನದ ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇