ಶಿವಮೊಗ್ಗ : ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ.
ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಆತ ಕೊನೆಯುಸಿರೆಳೆದಿದ್ದಾನೆ.
ವಿದ್ಯಾನಗರದಲ್ಲಿ ಮಂಜುನಾಥ ಓಲೇಕಾರ್ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. 12 ಗಂಟೆಗೆ ಸಂಭ್ರಮಾಚರಣೆ ವೇಳೆ ಮಂಜುನಾಥ ಓಲೇಕರ್ ತಮ್ಮ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆದರೆ ಆ ಗುಂಡು ಮಂಜುನಾಥ ಓಲೇಕಾರ್ ಅವರ ಮಗನ ಸ್ನೇಹಿತ ವಿನಯ್ ಗೆ ತಗುಲಿತ್ತು.
ಗಂಭೀರವಾಗಿ ಗಾಯಗೊಂಡಿದ್ದ ವಿನಯ್ ನನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ವಿನಯ್ ಮೃತಪಟ್ಟಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ತಿಳಿಸಿದ್ದಾರೆ.
ಮೃತ ವಿನಯ್ ಹೊಸನಗರದಲ್ಲಿ ಹಲವು ವರ್ಷ ನೆಲೆಸಿದ್ದರು. ಹೊಸನಗರ ಜಿಮ್ಮಿ ಜಾರ್ಜ್ ವಾಲಿಬಾಲ್ ಗೆ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು ಹಾಗೂ ವಾಲಿಬಾಲ್ ಆಟದಲ್ಲಿ ತಮ್ಮನ್ನ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು.