ಶಿವಮೊಗ್ಗ : ಮಲ್ಲಿಗೇನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ ಬಳಿ ಬೈಕ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಖಾಸಗಿ ಸಂಸ್ಥೆಗೆ ಸೇರಿದ ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ಬಸ್ ಚಕ್ರದಡಿ ಸಿಲುಕಿಕೊಂಡಿದ್ದು, ಸಂಪೂರ್ಣ ನುಜ್ಜುಗುಜ್ಜಾಗಿದೆ.
ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತನನ್ನು ಜಾರ್ಖಂಡ್ ಮೂಲದ ಯುವಕ ಅನ್ಸಾರಿ ಎನ್ನಲಾಗುತ್ತಿದೆ.
ಸ್ಥಳಕ್ಕೆ ಸಂಚಾರಿ ಪಶ್ಚಿಮ ಪೊಲೀಸರು ಭೇಟಿ ನೀಡಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.