ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಬೇಡ ಎಂದು ಮತ್ತೊಮ್ಮೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಬಂದಾಗ, ವಿಮಾನ ನಿಲ್ಧಾಣಕ್ಕೆ ಬಿಎಸ್ವೈ ಹೆಸರನ್ನು ಇಟ್ಟು ದೆಹಲಿಗೆ ಪ್ರಸ್ತಾವನೆ ಕಳಿಸಲಾಗುವುದು ಎಂದು ತಿಳಿಸಿದ್ದರು.
ಇದರ ಬೆನ್ನಲ್ಲೆ ಇದೀಗ ಶಿವಮೊಗ್ಗ ಏರ್ಪೋರ್ಟ್ಗೆ ತಮ್ಮ ಹೆಸರಿಡದಂತೆ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡಲು ಮಾಡಿದ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಹಾಗೂ ನಾಡಿನ ಅಭಿವೃದ್ಧಿಗೆ ಶ್ರಮಿಸಿದ ಮಹನೀಯರ ಹೆಸರಿಡುವಂತೆ ಮನವಿ ಮಾಡಿದ್ದಾರೆ.
ಪತ್ರದ ಸಾರಾಂಶ:
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿಡುವುದಾಗಿ ನೀವು ಘೋಷಣೆ ಮಾಡಿರುತ್ತೀರಿ. ನೀವು ನನ್ನ ಮೇಲಿಟ್ಟಿರುವ ಈ ವಿಶೇಷ ಪ್ರೀತಿ, ಅಭಿಮಾನಕ್ಕೆ ಧನ್ಯವಾದ. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನಪ ರಿಷತ್ ಸದಸ್ಯರು, ಸಂಘ-ಸಂಸ್ಥೆಗಳಿಗೂ ನಾನು ಈ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸುತ್ತೇನೆ.
ಈ ರಾಷ್ಟ್ರ ಈ ಹಾಗೂ ರಾಜ್ಯದ ಅಭಿವೃದ್ಧಿಗೆ ಅನೇಕ ಮಹನೀಯರು ಹಾಗೂ ದೇಶಭಕ್ತರು ಕೊಡುಗೆ ನೀಡಿದ್ದಾರೆ. ಅವರಿಗೆ ಹೋಲಿಸಿದರೆ ನ್ನದು ಅಳಿಲು ಸೇವೆ. ಜನರು ಕೊಟ್ಟ ಅವಕಾಶವನ್ನು ಬಳಸಿಕೊಂಡು ಜಿಲ್ಲೆಯ ಜನರ ಸೇವೆ ಮಾಡಿದ್ದೇನೆ ಎಂಬ ಧನ್ಯತಾ ಭಾವ ಮಾತ್ರ ನನ್ನದು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಗಣ್ಯರ ಹೆಸರನ್ನು ಇಡಬೇಕು. ನನ್ನ ಹೆಸರನ್ನು ಇಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
 
                         
                         
                         
                         
                         
                         
                         
                         
                         
                        