ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ 2023-24 ನೇ ಸಾಲಿನ ಬಜೆಟ್ ಚುನಾವಣಾ ತಂತ್ರಗಾರಿಕೆ ಬಜೆಟ್ ಆಗಿದೆಯೇ ಹೊರತು ಇದರಲ್ಲಿ ಯಾವುದೇ ಅಭಿವೃದ್ಧಿ ಕಾರ್ಯದ ಮುನ್ನೋಟವಿಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಆರೋಪಿಸಿದ್ದಾರೆ.
ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಹೇಳಿದ್ದರು. ಎಲ್ಲೂ ಕೂಡ ದುಪ್ಪಟ್ಟು ಮಾಡಲು ಯೋಜನೆ ಹಾಕಿಕೊಂಡಿಲ್ಲ. ಕೇಂದ್ರ ಸರ್ಕಾರ ಈ ಸಲ ಕೃಷಿಗೆ 50 ಸಾವಿರ ಕೋಟಿ ರೂಪಾಯಿ ಅನುದಾನ ಕಡಿಮೆ ಮಾಡಿದ್ದಾರೆ. ಹೀಗಾಗಿ ಈ ಸಲ ರಸಗೊಬ್ಬರದ ಬೆಲೆ ಹೆಚ್ಚಾಗಲಿದೆ. ಹಾಗಾದಲ್ಲಿ ರೈತರ ಆದಾಯ ಹೇಗೆ ದುಪ್ಪಟ್ಟು ಆಗುತ್ತದೆ ಎಂದು ಪ್ರಶ್ನಿಸಿದರು.
ಜೆಎಸ್ಟಿ ಹೆಚ್ಚಿಗೆ ಹಾಕಿದ್ದರಿಂದ ತೆರಿಗೆ ಹೆಚ್ಚು ಬಂದಿದೆ. ಮಜ್ಜಿಗೆ, ಮೊಸರು ಹೀಗೆ ಅಗತ್ಯ ಪದಾರ್ಥಗಳ ಮೇಲೆ ತೆರಿಗೆ ಹಾಕಿದ್ದಾರೆ. ಮೊದಲಿಗೆ ಇವುಗಳಿಗೆ ತೆರಿಗೆ ಹಾಕುತ್ತಾ ಇರಲಿಲ್ಲ. ಇವರ ಕೆಟ್ಟ ಆರ್ಥಿಕ ನೀತಿಯಿಂದ ಸಾಲದ ಸುಳಿಗೆ ಸಿಲುಕಿದ್ದಾರೆ. ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿ ಸಾಲದ ಸುಳಿಗೆ ಸಿಲುಕಿಸಿದ್ದಾರೆ. ಈ ಬಜೆಟ್ ನಿಂದ ರಾಜ್ಯದ ಜನರ ಸಮಸ್ಯೆಗಳು ಪರಿಹಾರವಾಗುವುದಿಲ್ಲ.
ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಹೇಳಿದ್ದರು. ಎಲ್ಲೂ ಕೂಡ ದುಪ್ಪಟ್ಟು ಮಾಡಲು ಯೋಜನೆ ಹಾಕಿಕೊಂಡಿಲ್ಲ. ಕೇಂದ್ರ ಸರ್ಕಾರ ಈ ಸಲ ಕೃಷಿಗೆ 50 ಸಾವಿರ ಕೋಟಿ ರೂಪಾಯಿ ಅನುದಾನ ಕಡಿಮೆ ಮಾಡಿದ್ದಾರೆ. ಹೀಗಾಗಿ ಈ ಸಲ ರಸಗೊಬ್ಬರದ ಬೆಲೆ ಹೆಚ್ಚಾಗಲಿದೆ. ಹಾಗಾದಲ್ಲಿ ರೈತರ ಆದಾಯ ಹೇಗೆ ದುಪ್ಪಟ್ಟು ಆಗುತ್ತದೆಯೇ ಎಂದು ಪ್ರಶ್ನಿಸಿದರು.
ರೈತರ ಮತ್ತು ಸಣ್ಣ ಹಿಡುವಳಿದಾರರ ಕಲ್ಯಾಣಕ್ಕೆ ಯಾವುದೇ ಯೋಜನೆ ಘೋಷಿಸಿಲ್ಲ, ಒಟ್ಟು 3.07 ಲಕ್ಷ ಕೋಟಿ ಬಜೆಟ್ ನಲ್ಲಿ ನೀರಾವರಿ ಯೋಜನೆಗೆ ಒತ್ತು ನೀಡಿರುವುದಿಲ್ಲಾ ಪಕ್ಕದ ಅಂದ್ರ ಪ್ರದೇಶ ದಲ್ಲಿ ರೈತರ ನಿರಾವರಿಗೆ ಶೇ.15 ರಷ್ಟು ನೀಡಿದ್ದು ಇಂದಿನ ಬಜೆಟ್ ನಲ್ಲಿ ಕರ್ನಾಟಕ ರೈತರಿಗೆ ಕೇವಲ ಶೇ.6 ರಷ್ಟು ಮಿಸಲಿಟ್ಟಿರುತ್ತಾರೆ ತೊಟಗಾರಿಕೆ ಸಹ ಹೆಚ್ಚು ಒತ್ತು ನೀಡದೇ ಶೇ 12 ರಷ್ಟು ಮೀಸಲಿಟ್ಟಿದ್ದಾರೆ. ಕೃಷಿಕರು ಸಾಲದ ಹೊರೆಯಿಂದ ದೂರ ಉಳಿಯಲು ಯಾವುದೇ ಯೋಜನೆ ಘೊಷಿಸದೇ ಇರುವುದು ಬೇಸರದ ಸಂಗತಿಯಾಗಿದೆ.
ಇದೇ ವರ್ಷ ಕುಮಾರಸ್ವಾಮಿ ಬಜೆಟ್ ಮಂಡಿಸಲಿದ್ದಾರೆ :
ಚುನಾವಣೆ ಪೂರ್ವದ ಈ ಬಜೆಟ್ ಗೆ ಯಾವುದೇ ಮಹತ್ವ ಇಲ್ಲ. ಮುಂದಿನ ಮೇ ತಿಂಗಳಲ್ಲಿ ಚುನಾವಣೆ ಇದೆ.ಚುನಾವಣೆಯಲ್ಲಿ ಗೆದ್ದು ಕುಮಾರಸ್ವಾಮಿ ಸರ್ಕಾರ ಬರುತ್ತದೆ ಆಗ ರೈತರ ಪರವಾದ ಬಜೆಟ್ ಮಂಡಿಸಿ ರೈತರ ನೆರವಿಗೆ ಜೆಡಿಎಸ್ ಧಾವಿಸಲಿದೆ ಎಂದು ಹೇಳಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್