ಅಪರೂಪದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಇಬ್ಬರ ಬಂಧನ
ಅಪರೂಪದದ ವನ್ಯಜೀವಿ ಮಚ್ಚೆ ಗೂಬೆಗಳ ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಬಂಧಿಸಿರುವ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲೂಪುರ ಗ್ರಾಮದಲ್ಲಿ ನಡೆದಿದೆ.
ಮಚ್ಚೆ ಗೂಬೆ(ಅಥೀನ್ ಬ್ಲೆವಿನ್ )ಯನ್ನು ಅಕ್ರಮ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿನಾಯಕ ನೇತ್ರತ್ವದಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, 2 ಗೂಬೆಗಳನ್ನು ರಕ್ಷಣೆ ಮಾಡಿದ್ದಾರೆ.
1972ರ ವನ್ಯ ಜೀವಿ ಸಂರಕ್ಷಣಾ ಕಾಯಿದೆಯ ಪ್ರಕಾರ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ ನ್ಯಾಯಲಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಕಾರ್ಯಾಚರಣೆಯಲ್ಲಿ ಸಾಗರ ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಗಣೇಶ್,ಗಿರೀಶ್ ,ವಿಶ್ವನಾಥ, ಕೃಷ್ಣ , ದಿನೇಶ, ಮಹೇಶ್, ಮತ್ತು ಚೈತ್ರ ಪಾಲ್ಗೊಂಡಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್