ಅಶಾ,ಅಂಗನವಾಡಿ ಕಾರ್ಯಕರ್ತೆಯರ ಸೇವೆ ಪರಮ ಶ್ರೇಷ್ಟ ಸೇವೆ – ಹರತಾಳು ಹಾಲಪ್ಪ|haratalu

ರಿಪ್ಪನ್‌ಪೇಟೆ : ಜಗತ್ತನ್ನೆ ತಲ್ಲಣಗೊಳಿಸಿದ ಕೋರೋನಾ ಮಹಾಮಾರಿಯ ಸಂದರ್ಭದಲ್ಲಿ ಹಗಲಿರುಳು ತಾಯಿಯಂತೆ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಸಮಾಜದ ರಕ್ಷಣೆಗಾಗಿ ಅಶಾ ಅಂಗನವಾಡಿ ಕಾರ್ಯಕರ್ತೆಯರು ಸೇವೆ ಮಾಡಿ ದೇಶಕ್ಕೆ ಮಾದರಿಯಾಗಿದ್ದಾರೆಂದು ಕ್ಷೇತ್ರದ ಶಾಸಕ ಹಾಗೂ ಎಂ.ಎಸ್.ಐ.ಎಲ್.ಅಧ್ಯಕ್ಷ ಹರತಾಳು ಹಾಲಪ್ಪ ಪ್ರಶಂಶೆ ವ್ಯಕ್ತಪಡಿಸಿದರು.

ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶ್ರೀರಾಘವೇಂದ್ರ ಸ್ವಾಮಿ ಮಠದ ಸಭಾ ವನದಲ್ಲಿ ಅಯೋಜಿಸಲಾದ ಅಂಗನವಾಡಿ ಹಾಗೂ ಅಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಮಾಡಿ ಮಾತನಾಡಿದ ಅವರು ಸರ್ಕಾರದ ಕನಿಷ್ಟ ವೇತನದ ನೌಕರರಾಗಿದ್ದರು ಸಹ ಗರಿಷ್ಟ ಮಟ್ಟದ ಸಮಾಜ ಸೇವೆಯನ್ನು ಮಾಡುತ್ತಾ ಹಗಲಿರುಳು ಶ್ರಮಿಸುತ್ತಿರುವ ಅಂಗನವಾಡಿ ಹಾಗೂ ಅಶಾ ಕಾರ್ಯಕರ್ತೆಯರುಗಳ ಸಾರ್ಥಕ ಸೇವೆಯನ್ನು ಪರಿಗಣಿಸಿ ಅವರುಗಳಿಗೆ ಅಭಿನಂದನೆಗಳ ಜೊತೆ ಗೌರವ ಸಮರ್ಪಣೆ ಮಾಡುತ್ತಿರುವುದು ನನಗೆ ಸಂತಸ ತಂದಿದೆ ಎಂದರು.


ರಾಜಕಾರಣ ಅದರಲ್ಲೂ ಶಾಸಕರಾದವರಿಗೆ ಜನಸಾಮಾನ್ಯದ ಮೇಲೆ ಪ್ರೀತಿ ವಿಶ್ವಾಸ ಅನುಕಂಪ ಕರುಣೆಗಳ ಜೊತೆಗೆ ಅಭಿವೃದ್ದಿ ಕಾರ್ಯಗಳ ಅರಿವಿದ್ದರೆ ಮಾತ್ರ ಅತ ಓರ್ವ ಒಳ್ಳಯ ಶಾಸಕನಾಗ ಬಹುದು ಅದು ಬಿಟ್ಟು ಶಾಸನ ಸಭೆಯಲ್ಲಿ ಜನರ ಸಂಕಷ್ಟಗಳ ಬಗ್ಗೆ ಹಾಗೂ ಕ್ಷೇತ್ರದ ಅಭಿವೃದ್ದಿಯ ಬಗ್ಗೆ ಇಂದು ಅಕ್ಷರ ಮಾತನಾಡದೇ ಬಣ್ಣ ಬಣ್ಣದ ವಸ್ತ್ರವನ್ನು ಧರಿಸಿ ಶುಭಸಮಾರಂಭಗಳು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ನಾಗರೀಕರ ಹೆಗಲ ಮೇಲೆ ಕೈ ಹಾಕಿ ಪೋಟೋ ಪೋಸ್ ಕೊಟ್ಟರೆ ಸಾಕಾ ಎಂದು ಮಾಜಿ ಶಾಸಕರ ಬಗ್ಗೆ ವ್ಯಂಗ್ಯವಾಡಿದರು.

ನಾಡುಕಂಡ ಮಹಾನ್ ಹೋರಾಟಗಾರ ಬಡವರ ಬಂಧು ಬಂಗಾರಪ್ಪರವರ ಗರಡಿಯಲ್ಲಿ ಬೆಳೆದ ನನಗೆ ಹೋರಾಟ ಮತ್ತು ಅಭಿವೃದ್ದಿ ಬಗ್ಗೆ ಒಂದಿಷ್ಟು ಅರಿವಿದೆ.ಅದು ಬಿಟ್ಟು  ಕ್ಷೇತ್ರದ ಅಭಿವೃದ್ದಿ ಮತ್ತು ಕ್ಷೇತ್ರದ ಸಮಸ್ಯೆಗಳ ಬಗ್ಗೆ ಜನಸಾಮಾನ್ಯರ ಸಂಕಷ್ಟಗಳ ಬಗ್ಗೆ ಯಾವುದೇ ಅರಿವಿಲ್ಲದೆ ಹಾಗೆಯೇ ಪರಿಶೀಲನೆ ಮಾಡದೇ ಹಾಗೂ  ಶಾಸನ ಸಭೆಯಲ್ಲಿ ಚರ್ಚಿಸದೇ ಎರಡು ಭಾರಿ ನಾನು ಶಾಸಕನಾಗಿದ್ದೇ ಎನ್ನುವ ಪರಿಕಲ್ಪನೆಯಲ್ಲಿ ಬೀಗುವ ಮಾಜಿ ಶಾಸಕರು ಕ್ಷೇತ್ರದಲ್ಲಿ ಜನಮಾನಸದಲ್ಲಿ ಉಳಿಯುವಂತಹ ಯಾವ ಅಭಿವೃದ್ದಿ ಕಾರ್ಯವನ್ನು ಮಾಡಿದ್ದಾರೆಂದು ಸಾಬೀತು ಪಡಿಸಲಿ ಎಂದು ಟೀಕಿಸಿದರು

ಹಾಲಪ್ಪ ಮತ್ತು ರಾಘಪ್ಪ ಕ್ಷೇತ್ರದ ಅಭಿವೃದ್ದಿಯ ಡಬಲ್ ಇಂಜಿನ್ :

ಸಂಸದ ಬಿ.ವೈ.ರಾಘವೇಂದ್ರ ಮತ್ತು ನಾನು ರಾಜ್ಯ ಮತ್ತು ಕೇಂದ್ರ ಸರ್ಕರದ ಅನುದಾನದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳಿಗೆ ಮೊದಲ ಅಧ್ಯತೆ ನೀಡುವುದರ ಮೂಲಕ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಅಭಿವೃದ್ದಿಯ ಕುರಿತು ಹಗಲಿರುಳು ಶ್ರಮಿಸುತ್ತಿದ್ದು ನಾವುಗಳಿಬ್ಬರು ಡಬಲ್ ಇಂಜಿನ್ ಇದ್ದಂತೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ರಾಜ್ಯದ ಬಿಎಸ್‌ವೈ ಹಾಗೂ ಈಗಿನ ಬಸವರಾಜ್ ಬೊಮ್ಮಾಯಿ ಸರ್ಕಾರ ಡಬಲ್ ಇಂಜಿನ್ ಸರ್ಕಾರದಂತೆ  ವ್ಯಾಖ್ಯಾನಿಸಿದರು.

ಈ ಸಂಧರ್ಭದಲ್ಲಿ ಬಿಜೆಪಿ ತಾಲೂಕ್ ಅಧ್ಯಕ್ಷ ಗಣಪತಿ ಬೆಳಗೋಡು, ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ, ಜಿಪಂ ಮಾಜಿ ಸದಸ್ಯೆ ಎ ಟಿ ನಾಗರತ್ನಮ್ಮ , ಹೊಸನಗರ ತಾಲೂಕ್ ಮಹಿಳಾ ಮತ್ತು ಮಕ್ಕಳ ಇಲಾಖೆಯ ಅಧಿಕಾರಿ ಶಶಿರೇಖಾ,ಗ್ರಾಪಂ ಸದಸ್ಯ ಕಲ್ಲಿ ಯೋಗೇಂದ್ರ , ಮುಖಂಡರಾದ ಶೀಲಾ ಗಂಗನಾಯ್ಕ್ ,ಸರಸ್ವತಿ ಗಣಪತಿ,ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ವೇತಾ ಹಾಗೂ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

Ranks Institute–ಜೆಸಿಐ ಹೊಸನಗರ ಡೈಮಂಡ್‌ ಆಯೋಜನೆಯಲ್ಲಿ ‘Gen Z Connect’ ಯಶಸ್ವಿ

ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್‌ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…

19 hours ago

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…

22 hours ago

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…

23 hours ago

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ – ಬಿ ವೈ ವಿಜಯೇಂದ್ರ ಆಕ್ರೋಶ

ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…

23 hours ago

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ

ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…

1 day ago

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ

ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…

1 day ago