ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಾಲ್ಕು ವರ್ಷದ ಮಗು ಇಂದು ಮನೆಯ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿದೆ.
ಎರಡು ದಿನಗಳ ಹಿಂದೆ ಮನೆಯ ಬಳಿ ಆಟವಾಡುತಿದ್ದ ಮಗು ಕಾಣೆಯಾಗಿತ್ತು,ಎಲ್ಲಾ ಕಡೆ ವಿಚಾರಿಸಿ ಕೊನೆಗೆ ಪೊಲೀಸ್ ಠಾಣೆಯಲ್ಲಿ ಅವರ ತಂದೆ ದೂರು ಸಲ್ಲಿಸಿದ್ದರು. ಇಂದು ಮಗುವಿನ ಮೃತ ದೇಹ ಮನೆಯ ಸಮೀಪದ ಕೆರೆಯಲ್ಲಿ ತೇಲಿ ಬಂದಿದೆ.
ರಾಗಿಗುಡ್ಡದ 7 ನೇ ತಿರುವಿನಲ್ಲಿ ಮಹ್ಮದ್ ಸೂಫಿಯನ್ ಖುರೇಷಿ ಎಂಬುವರು ತಮ್ಮ ಮೊದಲನೇ ಮಗು ಮೊಹ್ಮದ್ ಮನ್ನನ್ ಖುರೇಷಿ ಕಾಣೆಯಾಗಿದ್ದಾನೆ ಎಂದು ದೂರು ನೀಡಿದ್ದರು. ಫೆ.11 ರಂದು ಮನೆಯ ಬಳಿ ಆಡುತ್ತಿದ್ದ ಮನ್ನನ್ ಖುರೇಷಿ ಮಧ್ಯಾಹ್ನದ ವೇಳೆ ದಿಡೀರನೇ ನಾಪತ್ತೆಯಾಗಿದ್ದನು.
ಇಂದು ಬೆಳಿಗ್ಗೆ ರಾಗಿಗುಡ್ಡದ ಕೆರೆಯಲ್ಲಿ ಮಗುವಿನ ಶವ ತೇಲಿ ಬಂದಿದೆ. ಇದನ್ನ ಕಂಡ ಸ್ಥಳೀಯರು ಮಗುವಿನ ಕುಟುಂಬಕ್ಕೆ ಮಾಹಿತಿ ತಿಳಿಸಿದ್ದಾರೆ
ಮನೆಯ ಸಮೀಪವಿರುವ ಕೆರೆಯಲ್ಲಿ ಆಟವಾಡಲು ಹೋಗಿ ನೀರಲ್ಲಿ ಮುಳುಗಿ ಮಗು ಸಾವನ್ನಪ್ಪಿರಬಹದು ಎಂದು ಅಂದಾಜಿಸಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್