ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ.
ಬೆಳಿಗ್ಗೆ 11.30ಕ್ಕೆ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.
ಇದಕ್ಕಾಗಿ ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದ ಬಳಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. 1 ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಒಂದೂವರೆಲಕ್ಷದಷ್ಟು ಜನ ಸೇರುವ ನಿರೀಕ್ಷೆ ಇದೆ. ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಕಾರ್ಯಕ್ರಮಕ್ಕೆ ಬರುವವರಿಗೆ ಸಮಾರಂಭದ ಸ್ಥಳದ ಆಸುಪಾಸಿನಲ್ಲಿ ವಾಹನ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. 200 ಕೌಂಟರ್‌ಗಳಲ್ಲಿ ಉಪಾಹಾರ, ಊಟದ ವ್ಯವಸ್ಥೆ ಮಾಡಲಾಗಿದೆ.
ಈ ಕಾರ್ಯಕ್ರಮ ಮುಗಿದ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೋಗಲಿದ್ದಾರೆ.
ಮಲೆನಾಡ ಹೆಬ್ಬಾಲಿನಲ್ಲಿ ನಿರ್ಮಾಣವಾದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಆಗುತ್ತಿದೆ. ರಾಜ್ಯದ 2ನೇ ಅತಿ ದೊಡ್ಡ ಏರ್ ಪೋರ್ಟ್ ಎಂಬ ಹೆಗ್ಗಳಿಕೆ ಪಡೆದ ಶಿವಮೊಗ್ಗ ಏರ್‌ಪೋರ್ಟ್, ಒಟ್ಟು 775 ಎಕರೆ ವಿಸ್ತಿರ್ಣದಲ್ಲಿ ನಿರ್ಮಾಣವಾಗಿದೆ. 449.2 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿದೆ. 3.2 ಕಿ.ಮೀ ರನ್ ವೇ ಹೊಂದಿದ್ದು, ಎಟಿಆರ್ ಸೇರಿದಂತೆ ಎಲ್ಲಾ ರೀತಿಯ ವಿಮಾನಗಳು ಲ್ಯಾಂಡಿಗ್ ಆಗಲಿವೆ. 4320 ಚದರಡಿ ವಿಸ್ತಿರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್ ಹಾಗೂ ವಿಮಾನ ನಿಲ್ದಾಣದ ಸುತ್ತ 15,900 ಮೀಟರ್ ಉದ್ದದ ಕಾಂಪೌಂಡ್ ಇದೆ.