ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಸ್ಟೇಷನ್ನಲ್ಲಿ ಕೆಲಸ ಮಾಡುತ್ತಿದ್ದ ಪೇದೆಯೊಬ್ಬರು ಕಾಣೆಯಾಗಿದ್ದಾರೆ ಎಂಬ ದೂರೊಂದು ಅದೇ ಸ್ಟೇಷನ್ನಲ್ಲಿ ದಾಖಲಾಗಿದ್ದು, ಆ ಸಂಬಂಧ ಎಫ್ಐಆರ್ ಕೂಡ ದಾಖಲಾಗಿದೆ.
ದಿನಾಂಕ: 07-12-2021 ರಿಂದ ಮಾಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಂತೋಷ್ ಕುಮಾರ್ ಎಂಬವರು ಕೋವಿಡ್ ಪಾಸೀಟಿವ್ ಬಂದ ಹಿನ್ನೆಲೆಯಲ್ಲಿ 24-01-2022 ರಿಂದ ದಿನಾಂಕ:31-01-2022 ರ ವಿಶೇಷ ರಜೆ ತೆಗೆದುಕೊಂಡಿದ್ದರಂತೆ.
ಆನಂತರ ವಾಪಸ್ ಕರ್ತವ್ಯಕ್ಕೆ ಹಾಜರಾಗಿಲ್ಲ. ಅಲ್ಲದೆ ಯಾವುದೇ ರೀತಿಯ ರಜೆಯನ್ನು ಸಹ ಪಡೆದುಕೊಳ್ಳದೆ ಗೈರಾಗಿದ್ದಾರೆ. ಈ ಸಂಬಂಧ ಪೊಲೀಸ್ ಅಧೀಕ್ಷಕರು ಪರಾರಿ ಪತ್ರವನ್ನು ಹೊರಡಿಸಿದ್ದರು. ಆದರೆ ಈ ಪತ್ರವನ್ನು ಜಾರಿಮಾಡಿದ್ದರು, ಪೊಲೀಸ್ ಕಾನ್ಸ್ಟೇಬಲ್ ಕೆಲಸಕ್ಕೆ ಹಾಜರಾಗಿಲ್ಲ. ಹೀಗಾಗಿ ಇವರ ವಿರುದ್ಧ ಮನುಷ್ಯ ಕಾಣೆ ಪ್ರಕರಣ ದಾಖಲಿಸುವಂತೆ ಎಸ್ಪಿ ಕಚೇರಿಯಿಂದ ಆದೇಶ ಹೊರಬಿದ್ದಿದೆ. ಹೀಗಾಗಿ ಈ ಸಂಬಂಧ ಮಾಳೂರು ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್