ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಅಂತ್ಯಕ್ರಿಯೆ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮಾಡಳಿತ|funeral

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಶವ ಸಂಸ್ಕಾರ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬೆಟ್ಟಿನಕೆರೆ ಗ್ರಾಮದ ಮನೆಯೊಂದರಲ್ಲಿ ವಾರಸುದಾರರಿಲ್ಲದ ಕೊಳೆತ ಸ್ಥಿತಿಯಲ್ಲಿದ್ದ ವೃದ್ದನೊಬ್ಬನ ಅಂತ್ಯಕ್ರಿಯೆ ಯನ್ನು ಗ್ರಾಮಾಡಳಿತದ ವತಿಯಿಂದ ನೆರವೇರಿಸಲಾಯಿತು.




ಪಟ್ಟಣದ ಬೆಟ್ಟಿನಕೆರೆ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಒಬ್ಬಂಟಿಯಾಗಿ ವಾಸ ಮಾಡುತಿದ್ದ ಜೋಸ್ (68) ಎಂಬ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈತನು ನಾಲ್ಕೈದು ದಿನಗಳ ಹಿಂದೆಯೇ ಮೃತಪಟ್ಟಿದ್ದನು ಎನ್ನಲಾಗುತ್ತಿದೆ.

ಇಂದು ಬೆಳಿಗ್ಗೆ ಜೋಸ್ ಮೃತಪಟ್ಟಿರುವ ವಿಷಯ ತಿಳಿಯುತಿದ್ದಂತೆ ಸ್ಥಳೀಯರು ಹಾಗೂ ಕುಟುಂಬಸ್ಥರಿಗೆ ಕರೆಯ ಮಾಹಿತಿ ತಿಳಿಸಲು ಪ್ರಯತ್ನಿಸಿದ್ದಾರೆ.ಆದರೆ ಕುಟುಂಬಸ್ಥರು ಸಮರ್ಪಕವಾಗಿ ಸ್ಪಂದಿಸದೇ ನಮಗೂ ಅವರಿಗೂ ಸಂಬಂಧವಿಲ್ಲವೆಂದು ಕಡ್ಡಿಮುರಿದಂತೆ ತಿಳಿಸಿದ್ದಾರೆ.

ಕೂಡಲೇ ಎಚ್ಚೆತ್ತುಕೊಂಡ ರಿಪ್ಪನ್‌ಪೇಟೆ ಗ್ರಾಪಂ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿ ಕಾನೂನು ರೀತ್ಯಾ ಕ್ರಮಕೈಗೊಂಡು ಅಂತ್ಯ ಸಂಸ್ಕಾರ ನೆರವೇರಿಸಿದರು.




ಮೃತ ವ್ಯಕ್ತಿಗೆ ಸಂಬಂಧಪಟ್ಟ ಸುಮಾರು ಒಂದೂವರೆ ಲಕ್ಷ ಮೌಲ್ಯದ 5 ಗೋವುಗಳನ್ನು ಆನಂದಪುರ ಸಮೀದ ಮುರುಘಾ ಮಠದ ಗೋಶಾಲೆಗೆ ಕಳುಹಿಸಿಕೊಡಲಾಯಿತು.ಮನೆ ಹಾಗೂ ಬೈಕ್ ನ್ನು ಗ್ರಾಮ ಪಂಚಾಯತಿ ಸುಪರ್ದಿಗೆ ತೆಗೆದುಕೊಳ್ಳಲಾಯಿತು.

ಈ ಸಂಧರ್ಭದಲ್ಲಿ ಪಿಡಿಓ ಜಿ ಚಂದ್ರಶೇಖರ್ ಗ್ರಾಪಂ ಸದಸ್ಯರಾದ
ಪಿ‌ ರಮೇಶ್ ,ಆಸೀಫ಼್ ಭಾಷಾ ರಕ್ಷಣಾ ಇಲಾಖೆಯ ಎಎಸೈ ಮಂಜಪ್ಪ ,ಹೆಡ್ ಕಾನ್ಸ್ ಟೇಬಲ್ ಪರಮೇಶ್ವರಪ್ಪ ಮತ್ತು ಗ್ರಾಪಂ ಸಿಬ್ಬಂದಿಗಳಾದ ನಾಗೇಶ್ ,ರಾಜೇಶ್ ಇದ್ದರು.




ಅನಾಥ ಶವದ ಅಂತ್ಯಕ್ರೀಯೆ ನಡೆಸಿದ ಗ್ರಾಮಾಡಳಿತದ ಪಿಡಿಓ ,ಸದಸ್ಯರು ಮತ್ತು ಸಿಬ್ಬಂದಿಗಳ ಕಾರ್ಯ ವೈಖರಿಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಅಪಘಾತ – ತಪ್ಪಿದ ಭಾರಿ ಅನಾಹುತ A school bus lost control…

4 hours ago

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿಕ್ಷಕರ ಗೌರವದ ಹೆಸರಿನಲ್ಲಿ ರಾಜಕೀಯ ಬೇಡ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ Congress leaders in Sagar have hit…

6 hours ago

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

9 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

14 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

16 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

1 day ago