ಗ್ರಾಮೀಣ ಭಾಗದ ಆಸ್ಪತ್ರೆಗೆ ಖಾಯಂ ವೈದ್ಯರನನು ನೇಮಿಸುವಂತೆ ಒತ್ತಾಯಿಸಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದ ಕಟ್ಟಡವನ್ನು ಏರಿ ಗ್ರಾಮಪಂಚಾಯಿತಿ ಅಧ್ಯಕ್ಷರೊಬ್ಬರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಶಿವಮೊಗ್ಗದ ಹೊಸನಗರ ತಾಲೂಕಿನ (ಬಿದನೂರು) ನಗರದ ಸರ್ಕಾರಿ ಆಸ್ಪತ್ರೆಗೆ ಖಾಯಂ ವೈದ್ಯರ ನೇಮಕ ಮಾಡುವಂತೆ ಆಗ್ರಹಿಸಿ ಆಸ್ಪತ್ರೆಯ ಕಟ್ಟಡ ಏರಿ ಗ್ರಾಪಂ ಅಧ್ಯಕ್ಷ ಕರುಣಾಕರ ಶೆಟ್ಟಿ ಪ್ರತಿಭಟಿಸಿದ್ದಾರೆ.
ಸುಮಾರು 30 ರಿಂದ 40 ಸಾವಿರ ಜನಸಂಖ್ಯೆ ಇರುವ ನಗರ ಹೋಬಳಿಯಲ್ಲಿ ಯಾವುದೇ ಖಾಯಂ ವೈದ್ಯರಿಲ್ಲದೇ ಸ್ಥಳೀಯರು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಕಟ್ಟಡವೇರಿ ಪ್ರತಿಭಟನೆ ನಡೆಸಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದರು.
ಈ ಹಿಂದೆ ತಾಲೂಕ್ ಕಛೇರಿ ಕಸ ಗುಡಿಸಿ ಪ್ರತಿಭಟನೆ ನಡೆಸಿದ್ದ ಕರುಣಾಕರ ಶೆಟ್ಟಿ.ನ್ಯಾಯಕ್ಕಾಗಿ ಈ ಹಿಂದೆ ಫಾರೆಸ್ಟ್ ಆಫೀಸ್ ಕಟ್ಟಡವನ್ನೂ ಕೂಡ ಏರಿ ಪ್ರತಿಭಟನೆ ನಡೆಸಿದ್ದರು.
ಗ್ರಾಮೀಣ ಭಾಗದ ಜನಪ್ರತಿನಿಧಿಗಳು ತಮ್ಮ ವ್ಯಾಪ್ತಿಯ ಜನಸಾಮಾನ್ಯರ ಸಮಸ್ಯೆಗಳನ್ನು ಸರ್ಕಾರದ ಗಮನ ಸೆಳೆಯಲು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ ಕಿವಿ ಹಿಂಡಿದರೂ ಸಂಬಂಧ ಪಟ್ಟ ಅಧಿಕಾರಿ ವರ್ಗದವರು ಈ ಬಗ್ಗೆ ತಲೆ ಕೆಡಿಸಿಕೊಳ್ಳದೇ ಇರುವುದು ಬೇಸರದ ಸಂಗತಿಯಾಗಿದೆ.
ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…
ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…
ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…