ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಇವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಿಗೆ 45 ವರ್ಷ ಎಂದು ಹೇಳಲಾಗಿದೆ.
ಜ.26 ರಂದು ವಿಪರೀತ ಜ್ವರದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಇವರಿಗೆ ಕಳೆದ ನಾಲ್ಕೈದು ದಿನಗಳಿಂದ ಜ್ವರ ಕಡಿಮೆ ಆಗಿರಲಿಲ್ಲ. ನಿನ್ನೆ ಆರ್ ಟಿ ಪಿ ಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಆರ್ ಟಿ ಪಿ ಸಿಆರ್ ಪರೀಕ್ಷೆಯಲ್ಲಿ ಕೆಎಫ್ ಡಿ ನೆಗೆಟಿವ್ ಬಂದಿದೆ. ಆರ್ ಟಿ ಪಿ ಸಿ ಆರ್ ಪಾಸಿಟಿವ್ ಬಂದರೆ ಮಾತ್ರ ಅದನ್ನ ಕೆಎಫ್ ಡಿ ಪ್ರಕರಣವೆಂದು ಪರಿಗಣಿಸಲಾಗುತ್ತದೆ. ಆದರೆ ಇತರೆ ರಕ್ತ ಪರೀಕ್ಷೆಯಲ್ಲಿ ಆತನಿಗೆ ಕೆಎಫ್ ಡಿ ಇದೆ ಎಂದು ವೈದ್ಯರು ಬರೆದಿರುವ ಕಾರಣ ಇದನ್ನ ಶಂಕಿತ ಪ್ರಕರಣವೆಂದು ಪರಿಗಣಿಸಲಾಗಿದೆ.
ಎರಡು ವರ್ಷಗಳಿಂದ ಮಲೆನಾಡಿನಲ್ಲಿ ಕೆ ಎಫ್ ಡಿ ಪ್ರಕರಣ ಅತೀ ಹೆಚ್ಚು ದಾಖಲಾಗಿತ್ತು. ಆದರೆ ಈ ವರ್ಷ ಇದುವರೆಗೂ ಕೆಎಫ್ ಡಿ ಪತ್ತೆಯಾಗಿರಲಿಲ್ಲ. 2023 ನೇ ಸಾಲಿನಲ್ಲಿ ಇದೇ ಮೊದಲ
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್